ಉಪ್ಪಿಯ ಕೆಪಿಜೆಪಿ ಪಕ್ಷದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಏನು ಗೊತ್ತಾ..?

31 Oct 2017 4:58 PM | Politics
595 Report

ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಹೊಸ ಪಕ್ಷವನ್ನು ಸ್ಥಾಪಿಸಬಹುದು. ಇದಕ್ಕಾಗಿ ಯಾರ ಅಪ್ಪಣೆಯನ್ನೂ ಪಡೆಯಬೇಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.

ನಟ ಉಪೇಂದ್ರ ಹೊಸ ಪಕ್ಷ ಸ್ಥಾಪಿಸುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಯವರು, ಜನ ಸಂಘಟನೆ ಮಾಡಲು ಸಂವಿಧಾನದಲ್ಲಿ ಅವಕಾಶ ನೀಡಲಾಗಿದೆ. ಹೀಗಾಗಿ ಹೊಸ ಪಕ್ಷ ಸ್ಥಾಪಿಸುವುದಕ್ಕೆ ಎಲ್ಲರಿಗೂ ಅವಕಾಶಗಳಿವೆ ಎಂದರು. ವಿದ್ಯುತ್ ಖರೀದಿಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಪಟ್ಟಂತೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಸದನ ಸಮಿತಿ ಅಧ್ಯಯನ ನಡೆಸುತ್ತಿದೆ. ಸಮಿತಿ ವರದಿ ಬಂದ ನಂತರ ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಸಿದ್ದರಾಮಯ್ಯ ಉತ್ತರಿಸಿದರು.

Edited By

Shruthi G

Reported By

Madhu shree

Comments