ಎರಡು ಪಕ್ಷಗಳ ಸದಸ್ಯರ ಮಧ್ಯೆ ವಾಗ್ವಾದ ಕಣ್ಣೀರಿಟ್ಟ ಮೇಯರ್
ಕವಿತಾ ಸನಿಲ್ ತನ್ನ ಅಪಾರ್ಟ್ ಮೆಂಟ್ ನ ಭದ್ರತಾ ಸಿಬ್ಬಂದಿ ಪತ್ನಿ ಮೇಲೆ ಹಲ್ಲೆ ನಡೆಸಿದ್ದಾರೆಂಬ ಆರೋಪದ ಮೇಲೆ ಬಿಜೆಪಿ ಸದಸ್ಯರು ರಾಜೀನಾಮೆಗೆ ಒತ್ತಾಯಿಸಿದರು. ಸಭೆ ನಡೆಯಲು ಬಿಡದೆ ಇದ್ದಾಗ ಮೇಯರ್ ಕಣ್ಣೀರಿಟ್ಟು ಕಟೀಲು ದುರ್ಗಾಪರಮೇಶ್ವರಿ ಮೇಲೆ ಆಣೆಯಿಟ್ಟರು.
ಮೇಯರ್ ಕವಿತಾ ಸನಿಲ್ ರಾಜೀನಾಮೆ ನೀಡಬೇಕೆಂದು ಬಿಜೆಪಿ ಮಹಾನಗರ ಪಾಲಿಕೆ ಸದಸ್ಯರುಗಳು ಒತ್ತಾಯಿಸಿದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಸಭೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ಮಧ್ಯೆ ವಾಗ್ವಾದ ಉಂಟಾಯಿತು. ಕವಿತಾ ಸನಿಲ್ ತನ್ನ ಅಪಾರ್ಟ್ ಮೆಂಟ್ ನ ಭದ್ರತಾ ಸಿಬ್ಬಂದಿ ಪತ್ನಿ ಮೇಲೆ ಹಲ್ಲೆ ನಡೆಸಿದ್ದಾರೆಂಬ ಆರೋಪದ ಮೇಲೆ ಬಿಜೆಪಿ ಸದಸ್ಯರು ರಾಜೀನಾಮೆಗೆ ಒತ್ತಾಯಿಸಿದರು. ಆರೋಪಿಸುವವರು ತಾಕತ್ತಿದ್ದರೆ ಕಟೀಲು ದೇವಳಕ್ಕೆ ಬಂದು ಪ್ರಮಾಣ ಮಾಡಲಿ ಎಂದು ಕಣ್ಣೀರಿಡುತ್ತಲೆ ಹೇಳಿ ಮೇಯರ್ ಕವಿತಾ ಸನಿಲ್ ಎದ್ದುಹೋದರು. ಆದರೆ ಈ ವೇಳೆ ಕಾಂಗ್ರೆಸ್ ಪಕ್ಷದ ಸದಸ್ಯರು ಇದಕ್ಕೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಎರಡು ಪಕ್ಷಗಳ ಸದಸ್ಯರ ಮಧ್ಯೆ ವಾಗ್ವಾದ ಉಂಟಾಯಿತು. ನಗರ ಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ಕೆಲಸಗಳು ಆಗಿಲ್ಲ. ಮೇಯರ್ ಕೇವಲ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಇತ್ತೀಚೆಗೆ ಮೇಯರ್ ತನ್ನ ಅಪಾರ್ಟ್ ಮೆಂಟ್ ನ ಭದ್ರತಾ ಸಿಬ್ಬಂದಿ ಪತ್ನಿಗೆ ಹಲ್ಲೆ ನಡೆಸಿ ಮುಜುಗರ ಉಂಟುಮಾಡಿದರು. ಇದು ತುಂಬಾ ನಾಚಿಕೆಯ ವಿಚಾರ. ಮೇಯರ್ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನೆ ನಡೆಸಿದ ಬಿಜೆಪಿ ಉತ್ತರ ವಿಭಾಗದ ಅಧ್ಯಕ್ಷ ವೇದವ್ಯಾಸ ಕಾಮತ್ ತಿಳಿಸಿದರು.
Comments