ಕನ್ನಡ ರಾಜ್ಯೋತ್ಸವಕ್ಕೆ ಕನ್ನಡಲ್ಲಿ ಶುಭ ಹಾರೈಸಿದ ಪ್ರಧಾನಿ ಮೋದಿ

ರಾಜ್ಯಾದ್ಯಂತ ಇಂದು 62ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ರಾಜ್ಯದ ಜನತೆಗೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡಿಗರಿಗೆ ಕನ್ನಡದಲ್ಲಿಯೇ ಶುಭಾಶಯಗಳನ್ನು ತಿಳಿಸಿದ್ದಾರೆ.
ರಾಜ್ಯದಾದ್ಯಂತ ಕನ್ನಡ ರಾಜ್ಯೋತ್ಸವ ದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಕನ್ನಡ ರಾಜ್ಯೋತ್ಸವ ದಿನ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ಯದ ಜನತೆಗೆ ಕನ್ನಡದಲ್ಲಿಯೇ ಶುಭಾಶಯಗಳನ್ನು ಕೋರಿದ್ದಾರೆ. ಕರ್ನಾಟಕ ರಾಜ್ಯೋತ್ಸವದಂದು ಕರ್ನಾಟಕದ ಜನತೆಗೆ ನನ್ನ ಶುಭ ಹಾರೈಕೆಗಳು. ಕರ್ನಾಟಕದ ಶ್ರೀಮಂತ ಸಂಸ್ಕೃತಿಯ ಬಗ್ಗೆ ನಮಗೆ ಹೆಮ್ಮೆ ಇದೆ. ಅದರ ಪ್ರಗತಿಗಾಗಿ ಪ್ರಾರ್ಥಿಸುತ್ತೇನೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದಾರೆ.
Comments