ಜೆಡಿಎಸ್ ನಿಂದ 140 ಅಭ್ಯರ್ಥಿಗಳು ಚುನಾವಣಾ ಅಖಾಡಕ್ಕಿಳಿಯಲಿದ್ದಾರೆ : ರೇವಣ್ಣ ಹೇಳಿಕೆ

ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ರೇವಣ್ಣ ಅವರು, '2018ರ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ತಯಾರಿದ್ದು 224 ಮತ ಕ್ಷೇತ್ರಗಳಲ್ಲೂ ಸ್ಪರ್ಧಿಸುತ್ತೇವೆ. ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಕುಮಾರಸ್ವಾಮಿ ಬಿಡುಗಡೆ ಮಾಡುವರು' ಎಂದರು.
'ನಾನು ರೈತರ ಸಮಸ್ಯೆ ಪರಿಹರಿಸುವ ಅಭ್ಯರ್ಥಿಯಾಗಿದ್ದೇನೆ. ಕುಮಾರಸ್ವಾಮಿಯವರು ಮುಂದಿನ ಚುನಾವಣೆಯಲ್ಲಿ ಪಕ್ಷ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬಂದರೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದಾರೆ. ಹಾಗಾಗಿ ಮುಂದಿನ ದಿನಗಳಲ್ಲಿ ಜೆಡಿಎಸ್ ರೈತರ ಪಕ್ಷವಾಗಲಿದೆ. ಅಧಿಕಾರಕ್ಕೆ ಬಂದೇ ಬರುತ್ತೇವೆ' ಎಂದು ತಿಳಿಸಿದರು. ನಟ ಉಪೇಂದ್ರ ಮತ್ತು ಮಾಜಿ ಪೊಲೀಸ್ ಅಧಿಕಾರಿ ಅನುಪಮಾ ಶೆಣೈ ಅವರು ಪಕ್ಷ ಸ್ಥಾಪನೆ ಮಾಡಿದ ಬಗ್ಗೆ ಗೌರವವಿದೆ. ಜನರಲ್ಲಿ ಇವರು ವಿಶ್ವಾಸ ಮೂಡಿಸಿ ಅಧಿಕಾರಕ್ಕೆ ಬಂದಲ್ಲಿ ನಾವು ಶುಭ ಹಾರೈಸುತ್ತೇವೆ. ಆದರೆ, ಕಾಂಗ್ರೆಸ್ ಪಕ್ಷದವರ ಥರ ಅವಹೇಳನಕಾರಿ ಹೇಳಿಕೆ ನೀಡುವುದಿಲ್ಲ' ಎಂದರು.
Comments