ಖಾಸಗಿ ವೈದ್ಯರ ಮುಷ್ಕರಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ : ರಮೇಶ್‍ಕುಮಾರ್

ಪ್ರತಿಭಟನೆ ಮಾಡಲು ಪ್ರತಿಯೊಬ್ಬರಿಗೂ ಸ್ವಾತಂತ್ರ್ಯವಿದೆ. ಪ್ರತಿಭಟನೆ ಮಾಡುವುದಕ್ಕಿಂತ ಮೊದಲು ಸರ್ಕಾರದ ಜತೆ ಅವರು ಯಾವುದೇ ಮಾತುಕತೆ ನಡೆಸಿಲ್ಲ. ಖಾಸಗಿ ಆಸ್ಪತ್ರೆಗಳ ನಿಯಂತ್ರಣ ವಿಧೇಯಕಕ್ಕೂ ಮುನ್ನ ಅವರ ಅಭಿಪ್ರಾಯವನ್ನು ನಾವು ಆಲಿಸಿದ್ದೇವೆ. ಆದರೆ, ಈಗ ಅವರು ಮುಷ್ಕರಕ್ಕೆ ಮುಂದಾಗಿದ್ದಾರೆ.
ಅವರು ನಡೆಸುತ್ತಿರುವ ಮುಷ್ಕರಕ್ಕೂ, ನಮಗೂ ಯಾವುದೇ ಸಂಬಂಧವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಸರ್ಕಾರಿ ಆಸ್ಪತ್ರೆಗಳಲ್ಲಿ ಅತ್ಯಾಧುನಿಕ ಸೌಲಭ್ಯಗಳಿವೆ. ಸಾರ್ವಜನಿಕರು ಆ ಸೌಲಭ್ಯಗಳನ್ನು ಮುಕ್ತವಾಗಿ ಬಳಸಿಕೊಳ್ಳಬಹುದು. ಸರ್ಕಾರ ಉಚಿತವಾಗಿ ಆರೋಗ್ಯ ಸೇವೆ ನೀಡುತ್ತಿದೆ. ಅಲ್ಲದೆ, ಹೈಟೆಕ್ ಸೌಲಭ್ಯಗಳನ್ನು ಕೂಡ ಒದಗಿಸುತ್ತಿದೆ ಎಂದು ಅವರು ಹೇಳಿದರು. ಪ್ರಸ್ತುತ ಸರ್ಕಾರಿ ಆಸ್ಪತ್ರೆಗಳು ಯಾವ ಖಾಸಗಿ ಆಸ್ಪತ್ರೆಗಳಿಗೂ ಕಡಿಮೆ ಇಲ್ಲ. ಕೆಲವು ಸರ್ಕಾರಿ ಆಸ್ಪತ್ರೆಗಳಲ್ಲಿ ಸೌಲಭ್ಯಗಳ ಕೊರತೆಯಿದ್ದು, ಅವುಗಳನ್ನು ನಿವಾರಿಸಲು ಕ್ರಮ ಕೈಗೊಳ್ಳುವುದಾಗಿ ಸಚಿವರು ತಿಳಿಸಿದರು.
Comments