ಅನ್ನದಾತರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧ- ಪ್ರಧಾನಿ ಮೋದಿ

ನವದೆಹಲಿ: ಮುಂದಿನ ಐದು ವರ್ಷಗಳಲ್ಲಿ ರೈತರ ಆದಾಯವನ್ನು ದ್ವಿಗುಣಗೊಳಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದ್ದು, ಅನ್ನದಾತ ರೈತರ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಮಂತ್ರಿ ಮೋದಿ ತಿಳಿಸಿದ್ದಾರೆ.
ನವದೆಹಲಿ: ಮುಂದಿನ ಐದು ವರ್ಷಗಳಲ್ಲಿ ರೈತರ ಆದಾಯವನ್ನು ದ್ವಿಗುಣಗೊಳಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದ್ದು, ಅನ್ನದಾತ ರೈತರ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಮಂತ್ರಿ ಮೋದಿ ತಿಳಿಸಿದ್ದಾರೆ.
ರಾಜಧಾನಿ ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುತ್ತಿರುವ ವರ್ಲ್ಡ್ ಫುಡ್ ಇಂಡಿಯಾ 2017 ಉತ್ಸವವನ್ನು ಉದ್ಘಾಟನೆ ಮಾಡಿದ ಬಳಿಕ ಮಾತನಾಡಿದ ಅವರು, ಅನ್ನದಾತರ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧವಾಗಿದೆ. ವಿಶ್ವ ಆರ್ಥಿಕತೆಯಲ್ಲಿ ಭಾರತ ಪ್ರಬಲವಾಗಿ ಬೆಳೆಯುತ್ತಿದ್ದು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸರಕು ಮತ್ತು ಸೇವಾ ತೆರಿಗೆ ಬಹು ಸಂಖ್ಯೆಯ ತೆರಿಗೆಗಳನ್ನು ತೊಡೆದು ಹಾಕಿದೆ ಎಂದು ಹೇಳಿದರು.
ಸರ್ಕಾರ ಈಗಾಗ್ಲೇ ಪ್ರಧಾನಮಂತ್ರಿ ಕಿಸಾನ್ ಸಂಪದ ಯೋಜನೆಯನ್ನು ಜಾರಿಗೆ ತಂದಿದೆ. ಇದು ಹೆಚ್ಚಿನ ಜನರಿಗೆ ಅನುಕೂಲವಾಗಲಿದೆ, ಆರ್ಥಿಕತೆಯಲ್ಲಿ ಭಾರತ ವಿಶ್ವದಲ್ಲಿಯೇ ಪ್ರಬಲವಾಗಿ ಬೆಳೆಯುತ್ತಿರುವ ದೇಶವಾಗಿದ್ದು, ಸರಕು ಮತ್ತು ಸೇವಾ ತೆರಿಗೆ ಯಂತಹ ನಿರ್ಧಾರಗಳು ಬಹುಸಂಖ್ಯೆಯ ತೆರಿಗೆಗಳನ್ನು ತೊಡೆದು ಹಾಕುತ್ತಿದೆ ಎಂದರು.
Comments