ಬಿಜೆಪಿ ತೊರೆದ ವಿಜಯ ಶಂಕರ್ ಕಾಂಗ್ರೆಸ್ ನತ್ತ
'ಬಿಜೆಪಿಯಲ್ಲಿ ನನಗೆ ಅತೀವ ಅನ್ಯಾಯವಾಗಿದೆ. ನನ್ನ ಮಾತೃಪಕ್ಷ ಕಾಂಗ್ರೆಸ್ ಸೇರುವೆ. 15 ದಿನದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ' ಎಂದು ಮಾಜಿ ಸಚಿವ, ಕುರುಬ ಸಮುದಾಯದ ಪ್ರಭಾವಿ ಮುಖಂಡ ಸಿ.ಎಚ್.ವಿಜಯ ಶಂಕರ್ ಹೇಳಿದ್ದಾರೆ.
ಕಳೆದ ಹಲವು ದಿನಗಳಿಂದ ಬಿಜೆಪಿಯ ಚಟುವಟಿಕೆಗಳಿಂದ ಸಿ.ಎಚ್.ವಿಜಯ ಶಂಕರ್ ದೂರ ಉಳಿದಿದ್ದರು. ಮೈಸೂರಿನಲ್ಲಿ ನಡೆದ ಬಿಜೆಪಿಯ ರೈತ ಸಮಾವೇಶಕ್ಕೂ ಗೈರು ಹಾಜರಾಗಿದ್ದರು. ಆಗಲೇ ಅವರು ಬಿಜೆಪಿ ತೊರೆಯಲಿದ್ದಾರೆ ಎಂಬ ಸುದ್ದಿಗಳು ಹಬ್ಬಿದ್ದವು. ಅಕ್ಟೋಬರ್ 28ರಂದು ವಿಜಯ ಶಂಕರ್ ಬಿಜೆಪಿ ತೊರೆದಿದ್ದರು.ವಿಜಯ ಶಂಕರ್ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಮೈಸೂರಿನಲ್ಲಿ ಮಾತನಾಡಿದ ಅವರು, '15 ದಿನದಲ್ಲಿ ಕಾಂಗ್ರೆಸ್ ಸೇರಲಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೂ ಮಾತುಕತೆ ನಡೆಸಿದ್ದೇನೆ' ಎಂದು ತಿಳಿಸಿದ್ದಾರೆ.ಕುರುಬ ಸಮುದಾಯಕ್ಕೆ ಸೇರಿದ ಸಿ.ಎಚ್.ವಿಜಯ ಶಂಕರ್ ಮೈಸೂರು ಭಾಗದ ಪ್ರಭಾವಿ ಮುಖಂಡರು. ಅವರು ಪಕ್ಷ ತೊರೆದು ಕಾಂಗ್ರೆಸ್ ಸೇರಿದರೆ ಜಿಲ್ಲೆಯಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ ಉಂಟಾಗಲಿದೆ.
Comments