ಮೊದಲ ಬಾರಿಗೆ ವೇದಿಕೆ ಹಂಚಿಕೊಂಡ ಚೆನ್ನಮ್ಮ ದೇವೇಗೌಡ

ದೇವೇಗೌಡರ ಜತೆಗೆ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವುದನ್ನು ಹೊರತುಪಡಿಸಿದರೆ ರಾಜಕೀಯ ಸಭೆ, ಸಮಾರಂಭಗಳಲ್ಲಿ ಈವರೆಗೆ ಕಾಣಿಸಿಕೊಳ್ಳದೆ ಇದ್ದ ಚೆನ್ನಮ್ಮ ದೇವೇಗೌಡ ಅವರು ಈ ಬಾರಿ ಮಾತ್ರ ವೇದಿಕೆಯಲ್ಲಿ ಕಾಣಿಸಿಕೊಂಡರು.
ಇದೇ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರು ವೇದಿಕೆ ಹತ್ತಿದರು. ದೇವೇಗೌಡರ ಜತೆಗೆ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವುದನ್ನು ಹೊರತುಪಡಿಸಿದರೆ ರಾಜಕೀಯ ಸಭೆ, ಸಮಾರಂಭಗಳಲ್ಲಿ ಈವರೆಗೆ ಕಾಣಿಸಿಕೊಳ್ಳದೆ ಇದ್ದ ಚೆನ್ನಮ್ಮ ದೇವೇಗೌಡ ಅವರು ಈ ಬಾರಿ ಮಾತ್ರ ವೇದಿಕೆಯಲ್ಲಿ ಕಾಣಿಸಿಕೊಂಡರು. ಇದಕ್ಕೂ ಮುನ್ನ ಚಾಮುಂಡಿಬೆಟ್ಟದ ಶ್ರೀಚಾಮುಂಡೇಶ್ವರಿ ದೇವಸ್ಥಾನದಲ್ಲಿ ಕರ್ನಾಟಕ ವಿಕಾಸ ವಾಹಿನಿಗೆ ಚಾಲನೆ ನೀಡಿದ ಸಂದರ್ಭ, ಉತ್ತನಹಳ್ಳಿಯ ಶ್ರೀ ಜ್ವಾಲಾಮುಖೀ ತ್ರಿಪುರ ಸುಂದರಿದೇವಿ ಅಮ್ಮನವರ ದರ್ಶನ ಹಾಗೂ ಹಿನಕಲ್‌ನ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವಾಗಲು ಚೆನ್ನಮ್ಮ ಅವರು ದೇವೇಗೌಡರ ಜತೆಗಿದ್ದರು.
Comments