ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ಗ್ರೀನ್ ಸಿಗ್ನಲ್ ಕೊಟ್ಟಿಲ್ಲ : ಹೆಚ್.ಡಿ. ದೇವೇಗೌಡ

ಭವಾನಿ ರೇವಣ್ಣ ಅವರು ಪ್ರಜ್ವಲ್ ಸ್ಪರ್ಧೆ ಖಚಿತ. ವರಿಷ್ಠರು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎಂದು ತಿಳಿಸಿದ್ದರು. ಇಂದು ಬೆಂಗಳೂರಿನ ಜೆ.ಪಿ. ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆ.ಡಿ.ಎಸ್. ವರಿಷ್ಠರಾದ ಹೆಚ್.ಡಿ. ದೇವೇಗೌಡ ಅವರು, ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ಗ್ರೀನ್ ಸಿಗ್ನಲ್ ಕೊಟ್ಟಿಲ್ಲ. ವೈಟ್ ಸಿಗ್ನಲ್ಲೂ ಕೊಟ್ಟಿಲ್ಲ ಎಂದು ಹೇಳಿದ್ದಾರೆ.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಕಣಕ್ಕಿಳಿಯಲು ತಯಾರಿ ನಡೆಸಿದ್ದಾರೆ. 2 ದಿನಗಳ ಹಿಂದೆಯಷ್ಟೇ ಭವಾನಿ ರೇವಣ್ಣ ಅವರು ಪ್ರಜ್ವಲ್ ಸ್ಪರ್ಧೆ ಖಚಿತ. ವರಿಷ್ಠರು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎಂದು ತಿಳಿಸಿದ್ದರು. ಇಂದು ಬೆಂಗಳೂರಿನ ಜೆ.ಪಿ. ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆ.ಡಿ.ಎಸ್. ವರಿಷ್ಠರಾದ ಹೆಚ್.ಡಿ. ದೇವೇಗೌಡ ಅವರು, ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ಗ್ರೀನ್ ಸಿಗ್ನಲ್ ಕೊಟ್ಟಿಲ್ಲ. ವೈಟ್ ಸಿಗ್ನಲ್ಲೂ ಕೊಟ್ಟಿಲ್ಲ ಎಂದು ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ಚುನಾವಣೆ ಸ್ಪರ್ಧೆ ಕುರಿತಾಗಿ ಪ್ರತಿಕ್ರಿಯೆ ನೀಡಿದ ಅವರು, ಪ್ರಜ್ವಲ್ ರೇವಣ್ಣ ಅವರ ಸ್ಪರ್ಧೆ ಕುರಿತಾಗಿ ಯಾವುದೇ ತೀರ್ಮಾನವಾಗಿಲ್ಲ. ಮುಂದೆ ಪ್ರಜ್ವಲ್ ರೇವಣ್ಣ ಮತ್ತು ನಿಖಿಲ್ ಕುಮಾರ್ ಅವರು ರಾಜಕೀಯಕ್ಕೆ ಬರುತ್ತಾರೆ, ಎಂಬುದನ್ನು ಜನ ತೀರ್ಮಾನಿಸುತ್ತಾರೆ ಎಂದು ಹೇಳಿದ್ದಾರೆ. ದೇವೇಗೌಡರ ನೇತೃತ್ವದಲ್ಲಿ ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ಕನಕಪುರ ಕ್ಷೇತ್ರದಿಂದ ಜೆ.ಡಿ.ಎಸ್. ಅಭ್ಯರ್ಥಿಯಾಗಿ ಡಿ.ಎಂ. ವಿಶ್ವನಾಥ್ ಅವರನ್ನು ಕಣಕ್ಕಿಳಿಸುವ ಕುರಿತು ಚರ್ಚಿಸಲಾಗಿದೆ.
Comments