ಐಟಿ ಅಧಿಕಾರಿಗಳಿಂದಲೇ ಬಿಜೆಪಿ ಸೇರಲು ಡಿಕೆಶಿಗೆ ಆಫರ್: ಸಿಎಂ ಆರೋಪ

ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು ದಾಳಿಯಿಂದ ತಪ್ಪಿಸಿಕೊಳ್ಳಲು ಬಿಜೆಪಿ ಸೇರಿ ಎಂದು ನೇರವಾಗಿಯೇ ಹೇಳಿದ್ದರಂತೆ. ಅಧಿಕಾರಿಗಳ ಮಟ್ಟದಲ್ಲಿ ಕೇಸರೀಕರಣ ಯಾವ ಮಟ್ಟಕ್ಕೆ ಆಗುತ್ತಿದೆ ಎಂಬುದನ್ನು ಇದರಿಂದ ಅರ್ಥಮಾಡಿಕೊಳ್ಳಬೇಕೆಂದು ಸಿಎಂ ಹೇಳಿದ್ದಾರೆ .
ಇತ್ತೀಚೆಗಷ್ಟೆ ರಾಜ್ಯದ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದ ಆದಾಯ ಮತ್ತು ತೆರಿಗೆ ಇಲಾಖೆಯ ಅಧಿಕಾರಿಗಳು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುವಂತೆ ಡಿ.ಕೆ. ಶಿವಕುಮಾರ್ ಅವರನ್ನು ಕೇಳಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಕೇಂದ್ರ ಸರ್ಕಾರದ ನೋಟು ನಿಷೇಧ ನಿರ್ಧಾರಕ್ಕೆ ಒಂದು ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಕೆಪಿಸಿಸಿ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಆಯೋಜಿಸಿದ್ದ 'ಭಾರತ ನರಳುತ್ತಿದೆ' ಕರಾಳ ದಿನಾಚರಣೆಯಲ್ಲಿ ಮಾತನಾಡಿರುವ ಅವರು, ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುವಂತೆ ದಾಳಿ ಸಂದರ್ಭದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳೇ ಹೇಳಿದ್ದರು ಎಂದು ಸಿಎಂ ಹೇಳಿದ್ದಾರೆ.
Comments