ಸಿದ್ದರಾಮಯ್ಯ ಮಾಡಿರುವ ಟೀಕೆಗೆ ತಲೆಕೆಡಿಸಿಕೊಳ್ಳುವುದಿಲ್ಲ: ಎಚ್ ಡಿಡಿ

ಕರ್ನಾಟಕ ವಿಕಾಸ ವಾಹಿನಿ ಯಾತ್ರೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಡಿರುವ ಟೀಕೆಗೆ ತಲೆಕೆಡಿಸಿಕೊಳ್ಳುವುದಿಲ್ಲ. ನಾವು ಅಧಿಕಾರದಲ್ಲಿದ್ದಾಗ ಏನು ಮಾಡಿದ್ದೇವೆ ಎಂಬುದು ಗೊತ್ತಿದೆ. ಮುಂದೆ ಅಧಿಕಾರಕ್ಕೆ ಬಂದರೆ ಏನು ಮಾಡಬೇಕು ಎಂಬುದೂ ಗೊತ್ತಿದೆ ಎಂದು ಹೇಳಿದರು.
ಗ್ರಾಮವಾಸ್ತವ್ಯ ಮಾಡಿ ಮರುದಿನ ದಿಂಬು ಹಾಸಿಗೆ ತರ್ತಾರೆ ಎಂದು ಹೇಳಿದ್ದಾರೆ. ಮಂಗಳವಾರ ಕುಮಾರಸ್ವಾಮಿ ಚಿಕ್ಕಮಗಳೂರಿನ ಮುಗುಳವಳ್ಳಿಯ ದಲಿತರ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು. ಅಲ್ಲಿಗೆ ಹೋಗಿ ಏನೇನು ತೆಗೆದುಕೊಂಡು ಬರಲಾಗಿದೆ ಎಂಬುದನ್ನು ಮುಖ್ಯಮಂತ್ರಿ ನೋಡಿಕೊಂಡು ಬರಲಿ ಎಂದು ವ್ಯಂಗ್ಯವಾಡಿದರು.ಆಕಾಂಕ್ಷಿಗಳ ಸಭೆ: ಅತ್ತ ಕುಮಾರಸ್ವಾಮಿ ಕರ್ನಾಟಕ ವಿಕಾಸ ವಾಹಿನಿ ಯಾತ್ರೆ ನಡೆಸುತ್ತಿದ್ದರೆ ಇತ್ತ ದೇವೇಗೌಡರು ಪಕ್ಷದ ಕಚೇರಿಯಲ್ಲಿ ಹಳೇ ಮೈಸೂರು ಭಾಗದ ವಿಧಾನಸಭೆ ಕ್ಷೇತ್ರವಾರು ಮುಖಂಡರ ಸಭೆಗೆ ಚಾಲನೆ ಕೊಟ್ಟಿದ್ದು, ಬುಧವಾರ ಕನಕಪುರ ಕ್ಷೇತ್ರದ ಸಭೆ ನಡೆಸಿದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಸ್ಪರ್ಧೆ ಮಾಡಿ ಸೋತಿದ್ದ ಡಿ.ಎಂ.ವಿಶ್ವನಾಥ್ ಅವರನ್ನೇ ಈ ಬಾರಿಯೂ ಕನಕಪುರದಲ್ಲಿ ಸ್ಪರ್ಧೆಗೆ ಇಳಿಸಲು ಒಲವು ವ್ಯಕ್ತವಾಯಿತು.
Comments