ನಾನು ಮತ್ತು ರೇವಣ್ಣ ಮಾತ್ರ ಸ್ಪರ್ಧಿಸುತ್ತೇವೆ ಎಚ್ ಡಿಕೆ ಸ್ಪಷ್ಟನೆ

ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು 'ಪ್ರಜ್ವಲ್ ಸ್ಪರ್ಧೆಗೆ ಯಾವುದೇ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ. ನಮ್ಮ ಕುಟುಂಬದಿಂದ ನಾನು ಮತ್ತು ರೇವಣ್ಣ ಮಾತ್ರ ಸ್ಪರ್ಧಿಸುತ್ತೇವೆ' ಎಂದು ಸ್ಪಷ್ಟನೆ ನೀಡಿದ್ದಾರೆ.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣಗೆ ಟಿಕೇಟ್ ನೀಡುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಗುರುವಾರ ಸ್ಪಷ್ಟನೆ ನೀಡಿದ್ದಾರೆ. ಟೀಕಾಕಾರರಿಗೆ ಉತ್ತರ ಕೊಡುವ ನಿಟ್ಟಿನಲ್ಲಿ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಬುಧವಾರ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಜೆಡಿಎಸ್ ವರಿಷ್ಠ ದೇವೇಗೌಡ'ಪ್ರಜ್ವಲ್ ರೇವಣ್ಣ ಸ್ಪರ್ಧಿಸುವ ಬಗ್ಗೆ ಗ್ರೀನ್ ಸಿಗ್ನಲ್ಲೂ ಕೊಟ್ಟಿಲ್ಲ,ವೈಟ್ ಸಿಗ್ನಲ್ಲೂ ಕೊಟ್ಟಿಲ್ಲ' "ಪ್ರಜ್ವಲ್ ರೇವಣ್ಣ ರಾಜಕೀಯದಲ್ಲಿ ಬೆಳೆಯುವುದು ನಿಶ್ಚಿತ. ಅದೇ ರೀತಿ ನಿಖೀಲ್ ಸಹ ರಾಜಕೀಯಕ್ಕೆ ಬರುವುದೂ ಸತ್ಯ' ಎಂದಿದ್ದರು.
Comments