ಜೆಡಿಎಸ್‍ಗೆ ಕೃಷ್ಣಮೂರ್ತಿ ಸೇರ್ಪಡೆ

ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಕೆ.ಕೃಷ್ಣಮೂರ್ತಿ, ಮಾಗಡಿ ಪುರಸಭೆ, ಬಿಡದಿ ಪುರಸಭೆಯ ಕಾಂಗ್ರೆಸ್‍ನ ಹಾಲಿ ಮತ್ತು ಮಾಜಿ ಸದಸ್ಯರು ಕೂಡ ಜೆಡಿಎಸ್‍ಗೆ ಸೇರ್ಪಡೆಯಾಗಲಿದ್ದಾರೆ. ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಕೂಡ ಮಂಜುನಾಥ್ ಅವರೊಂದಿಗೆ ಜೆಡಿಎಸ್‍ಗೆ ಸೇರ್ಪಡೆಯಾಗಲಿದ್ದಾರೆ.
ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ರಾಜ್ಯಾಧ್ಯಕ್ಷರಾದ ಎಚ್.ಡಿ.ಕುಮಾರಸ್ವಾಮಿ ಸಮ್ಮುಖದಲ್ಲಿ ಸೇರ್ಪಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಾಗಡಿ ತಾಲೂಕಿನ ಕುದೂರು ಜಿಲ್ಲಾ ಪಂಚಾಯಿತಿ ಸದಸ್ಯರಾದ ಎ.ಮಂಜುನಾಥ್ ಅವರಿಗೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಟಿಕೆಟ್ ನೀಡುವುದು ಬಹುತೇಕ ಖಾತರಿಯಾಗಿದೆ.
Comments