ಜೆಡಿಎಸ್‌ನಲ್ಲಿ ಯಾವುದೇ ರೀತಿಯ ಒಡಕಿಲ್ಲ ಕುಮಾರಸ್ವಾಮಿ ಸ್ಪಷ್ಟನೆ

ಜೆಡಿಎಸ್‌ನಲ್ಲಿ ಯಾವುದೇ ರೀತಿಯ ಒಡಕಿಲ್ಲ. ಎಲ್ಲರೂ ಒಗ್ಗಟ್ಟಾಗಿದ್ದೇವೆ' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ಎಚ್.ಡಿ.ರೇವಣ್ಣ ಅವರ ದೆಹಲಿ ಪ್ರವಾಸ ಪೂರ್ವ ನಿಯೋಜಿತವಾಗಿದ್ದರಿಂದ ಅವರು ದೆಹಲಿಗೆ ತೆರಳಿದ್ದರು.
ಬಸವರಾಜ ಹೊರಟ್ಟಿ ಹುಬ್ಬಳ್ಳಿಯಲ್ಲಿ ನಡೆಯಲಿರುವ ಸಮಾವೇಶದ ಪೂರ್ವ ಸಿದ್ಧತೆಯಲ್ಲಿ ತೊಡಗಿದ್ದರು. ಹೀಗಾಗಿ, ಮೈಸೂರಿನಿಂದ ಮಂಗಳವಾರ ಆರಂಭವಾದ ವಿಕಾಸವಾಹಿನಿ ಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಪಾಲ್ಗೊಂಡಿಲ್ಲ. ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಪಾದಯಾತ್ರೆ ನಡೆಸುತ್ತಿದ್ದು, ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲ್ಲಿರುವುದಾಗಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
Comments