ಕೆ.ಆರ್.ಪೇಟೆಯಿಂದ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು ಖಚಿತ : ಪ್ರಜ್ವಲ್ ರೇವಣ್ಣ

10 Nov 2017 3:44 PM | Politics
933 Report

ಕೆ.ಆರ್.ಪೇಟೆ ಜೆಡಿಎಸ್ ಪಕ್ಷದ ಭದ್ರಕೋಟೆಯಾಗಿದೆ. ಈ ಕ್ಷೇತ್ರದಲ್ಲಿ ಸ್ಪರ್ಧಿಸಲು ಯಾರಿಗೇ ಟಿಕೆಟ್ ನೀಡದರೂ, ಪಕ್ಷದ ಅಭ್ಯರ್ಥಿ ಗೆಲ್ಲುವು ಖಚಿತ ಎಂದು ಪ್ರಜ್ವಲ್ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದರು.

ನಾನು ಕೂಡಾ ಜೆಡಿಎಸ್ ಟಿಕೆಟ್ ಆಕಾಂಕ್ಷಿ. ಆದರೆ, ಟಿಕೆಟ್ ಬೇಕೇ ಬೇಕೆಂದು ಯಾರ ಮೇಲೂ ಒತ್ತಡ ಹಾಕುತ್ತಿಲ್ಲ' ಎಂದು ಜೆಡಿಎಸ್ ಯುವ ನಾಯಕ ಪ್ರಜ್ವಲ್ ರೇವಣ್ಣ ಸ್ಪಷ್ಟಪಡಿಸಿದ್ದಾರೆ.ಕೆ.ಆರ್.ಪೇಟೆ ತಾಲೂಕಿನ ಅರಳಕುಪ್ಪೆ ಗ್ರಾಮಕ್ಕೆ ಪ್ರಜ್ವಲ್ ರೇವಣ್ಣ ಭೇಟಿ ನೀಡಿ ಮಾತನಾಡಿದರು.ಈ ಬಾರಿಯ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಬೇಡ ಎಂದರೂ ಸಂತೋಷವಾಗಿಯೇ ಒಪ್ಪಿಕೊಳ್ಳುತ್ತೇನೆ. ಸ್ಪರ್ಧೆ ಮಾಡು ಎಂದರೆ, ಅದಕ್ಕೂ ಸಿದ್ಧ. ಒಟ್ಟಾರೆ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವುದೇ ನನ್ನ ಗುರಿ. ಅದಕ್ಕಾಗಿ ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡುತ್ತಿದ್ದೇನೆ' ಎಂದು ಹೇಳಿದರು.

Edited By

Shruthi G

Reported By

Shruthi G

Comments