ಪ್ರಜ್ವಲ್ ಸ್ಪರ್ಧೆ ಬಗ್ಗೆ ಎಚ್.ಡಿ.ರೇವಣ್ಣ ಹೇಳಿದ್ದು ಹೀಗೆ

ಪ್ರಜ್ವಲ್ ಸ್ಪರ್ಧೆ ಕುರಿತಂತೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಕುಟುಂಬದಲ್ಲಿ ಭಿನ್ನಮತ, ಗೊಂದಲವಿದೆ, ಹೊಡೆದಾಡಿಕೊಳ್ಳುತ್ತಿದ್ದಾರೆ ಎಂದು ಯಾರಾದರೂ ಭಾವಿಸಿದಲ್ಲಿ ಅದೊಂದು ಭ್ರಮೆಯಾಗಲಿದೆ ಎಂದು ತಿಳಿಸಿದ್ದಾರೆ.
ಪುತ್ರ ಪ್ರಜ್ವಲ್ ವಿಧಾನಸಭೆ ಚುನಾವಣೆ ಸ್ಪರ್ಧೆ ಕುರಿತಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತೀರ್ಮಾನವೇ ಅಂತಿಮ ಎಂದು ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣ ಹೇಳಿದ್ದಾರೆ. ನಾನು ಜೆಡಿಎಸ್ ಪಕ್ಷದ ಶಾಸಕನಾಗಲು 18 ವರ್ಷಗಳು ಬೇಕಾಯಿತು. ಪ್ರಜ್ವಲ್ ಇನ್ನೂ ಯುವಕ, ಮುಂದೆ ತುಂಬಾ ಭವಿಷ್ಯವಿದೆ. ಸೂಕ್ತ ಸಮಯದಲ್ಲಿ ಆತನ ಸ್ಪರ್ಧೆಗೆ ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.ಸದ್ಯ ಪ್ರಜ್ವಲ್, ತಾತಾ ಏನು ಹೇಳುತ್ತಾರೋ ಅದನ್ನು ಮಾಡುತ್ತೇನೆ ಎಂದು ತಿಳಿಸಿದ್ದಾನೆ. ತಾತನ ಆದೇಶದಂತೆ ಪಕ್ಷ ಸಂಘಟನೆಗಾಗಿ ದುಡಿಯುತ್ತಿದ್ದಾನೆ ಎಂದು ಎಚ್.ಡಿ.ರೇವಣ್ಣ ಹೇಳಿದ್ದಾರೆ.
Comments