ಜೆಡಿಎಸ್ ರಾಷ್ಟ್ರೀಯ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಸಿಂಧ್ಯಾ, ಎಚ್ ಡಿಡಿ ಅಧಿಕೃತ ಹೇಳಿಕೆ
ಜೆಡಿಎಸ್ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಟಿಪ್ಪು ಜಯಂತಿಯನ್ನು ಅಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜೆಡಿಎಸ್ ವರಿಷ್ಠ ಹಾಗು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ಪಕ್ಷದ ವೇದಿಕೆಯಲ್ಲಿಯೇ ಜೆಡಿಎಸ್ ರಾಷ್ಟ್ರೀಯ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಸಿಂಧ್ಯಾ ಅವರನ್ನು ಆಯ್ಕೆ ಮಾಡಿರುವುದಾಗಿ ಅಧಿಕೃತವಾಗಿ ಪ್ರಕಟಿಸಿದರು.
ಇತ್ತೀಚೆಗಷ್ಟೇ ಸಕ್ರೀಯ ರಾಜಕಾರಣಕ್ಕೆ ಮರಳಿದ್ದ ಪಿಜಿಆರ್ ಸಿಂಧ್ಯಾ ಅವರನ್ನು ಮೊದಲ ಬಾರಿಗೆ ರಾಷ್ಟ್ರೀಯ ಕಾರ್ಯಾಧ್ಯಕ್ಷ ಸ್ಥಾನವನ್ನು ಸೃಷ್ಠಿಸಿದ್ದು, ಆ ಸ್ಥಾನಕ್ಕೆ ಅವರನ್ನು ನೇಮಕ ಮಾಡಲಾಗಿದೆ. ಈ ಮೂಲಕ ಜೆಡಿಎಸ್ನಲ್ಲಿ ಕೇವಲ ರಾಜ್ಯ ಘಟಕಕ್ಕೆ ಸೀಮಿತವಾಗಿದ್ದ ಕಾರ್ಯಾಧ್ಯಕ್ಷ ಸ್ಥಾನವನ್ನು ರಾಷ್ಟ್ರೀಯ ಮಟ್ಟಕ್ಕೂ ವಿಸ್ತರಿಸಿದ್ದು, ಪಕ್ಷದ ನೂತನ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ ಪಿಜಿಆರ್ ಸಿಂಧ್ಯಾ ಅವರನ್ನು ಆಯ್ಕೆ ಮಾಡಲಾಗಿದ್ದು ಅಪ್ಪ-ಮಕ್ಕಳ ಪಕ್ಷ ಎನ್ನುವ ಹಣೆ ಪಟ್ಟಿಯಿಂದ ಹೊರ ಬರುವುದಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ.
Comments