ಉಪೇಂದ್ರ, ಕಮಲ್ ನಂತರ ಮತ್ತೊಬ್ಬ ನಟ ರಾಜಕೀಯಕ್ಕೆ ಎಂಟ್ರಿ ಕೊಡ್ತಿದ್ದರಂತೆ..!

ಇತ್ತೀಚಿಗೆ ರಾಜಕೀಯದಲ್ಲಿ ಸ್ಟಾರ್ ನಟರ ಅಬ್ಬರ ಜೋರಾಗಿದೆ. ಕನ್ನಡದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ತಮಿಳಿನ ಸೂಪರ್ ಸ್ಟಾರ್ ಕಮಲ್ ಹಾಸನ್ ಇಬ್ಬರು ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹೀಗಾಗಿ, ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಸಲು ಸಿದ್ದವಾಗುತ್ತಿದ್ದಾರೆ.
ಹೀಗಿರುವಾಗ, ಮತ್ತೋರ್ವ ನಟ ರಾಜಕೀಯ ಪ್ರವೇಶದ ಬಗ್ಗೆ ಸುಳಿವು ನೀಡಿದ್ದಾರೆ. ಹೌದು, ತೆಲುಗು ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ನಟನೆಯ ಮೂಲಕ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ರಾಜಕೀಯಕ್ಕೆ ಬರ್ತಾರೆ ಎಂಬ ಸುದ್ದಿಯನ್ನ ತೆಲುಗು ಮಾಧ್ಯಮಗಳು ವರದಿ ಮಾಡಿವೆ. ಅಲ್ಲು ಅರ್ಜುನ್ ರಾಜಕೀಯಕ್ಕೆ ಬರುತ್ತಾರೆ ಎಂಬ ಪ್ರಶ್ನೆ ಹಲವು ದಿನಗಳಿಂದ ಅಭಿಮಾನಿಗಳಲ್ಲಿ ಕಾಡುತ್ತಿತ್ತು. ಇತ್ತೀಚೆಗೆ ನಡೆದ ಪಾರ್ಟಿಯೊಂದರಲ್ಲಿ ಅಲ್ಲು ಅರ್ಜುನ್ ತಮ್ಮ ರಾಜಕೀಯ ಪ್ರವೇಶದ ಕುರಿತು ಮಾತನಾಡಿದ್ದಾರೆ ಎನ್ನಲಾಗಿದೆ. ಸದ್ಯ, ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಎರಡು ರಾಜ್ಯಗಳಲ್ಲಿನ ರಾಜಕೀಯ ಪರಿಸ್ಥಿತಿಗಳನ್ನು ಗಮನಿಸುತ್ತಿರುವ ನಟ, ಸೂಕ್ತ ಸಂದರ್ಭದಲ್ಲಿ ರಾಜಕೀಯಕ್ಕೆ ಪ್ರವೇಶ ನೀಡುವ ಕುರಿತು ಚಿಂತನೆ ನಡೆಸಿದ್ದಾರಂತೆ. ವಿಶೇಷ ಅಂದ್ರೆ 40ನೇ ವಯಸ್ಸಿನ ನಂತರವೇ ರಾಜಕೀಯಕ್ಕೆ ಬರ್ತಾರೆ ಎಂದು ಮೂಲಗಳು ತಿಳಿಸಿವೆ. ಈಗ ಅಲ್ಲು ಅರ್ಜುನ್ ಗೆ 34 ವರ್ಷ. ಸತತ ಸಿನಿಮಾಗಳಲ್ಲಿ ಬಿಜಿಯಾಗಿದ್ದಾರೆ. ಸದ್ಯ, 'ನಾ ಪೇರು ಸೂರ್ಯ' ಚಿತ್ರದಲ್ಲಿ ಅಲ್ಲು ಅರ್ಜುನ್ ನಟಿಸುತ್ತಿದ್ದಾರೆ.
Comments