ಕಮಲ್ ಹಾಸನ್ ಮಮತಾ ಬ್ಯಾನರ್ಜಿಯವರನ್ನು ಭೇಟಿ ಮಾಡಿದ್ದೇಕೆ ?

11 Nov 2017 3:33 PM | Politics
268 Report

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರನ್ನು ಭೇಟಿ ಮಾಡಿದ್ದ ಕಮಲ್ ಹಾಸನ್, ಈಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಭೇಟಿ ಮಾಡುವ ಮೂಲಕ ಕುತೂಹಲಕ್ಕೆ ಕಾರಣರಾಗಿದ್ದಾರೆ.

ಕೋಲ್ಕತ್ತಾದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಗಮಿಸಿರುವ ಕಮಲ್ ಹಾಸನ್, ಮಮತಾ ಬ್ಯಾನರ್ಜಿಯವರನ್ನು ಭೇಟಿ ಮಾಡಿದ್ದು, ಈ ವೇಳೆ ತಾವು ಮಮತಾ ಬ್ಯಾನರ್ಜಿಯವರ ಅಭಿಮಾನಿ ಎಂದು ಹೇಳಿಕೊಂಡಿದ್ದಾರೆ. ಕಮಲ್ ಹಾಸನ್ ರ ನಡೆಯನ್ನು ಗಮನಿಸುತ್ತಿರುವ ರಾಜಕೀಯ ಪಂಡಿತರು, ಬಿಜೆಪಿ ಹೊರತುಪಡಿಸಿ ಇತರೆ ಪಕ್ಷಗಳ ಜೊತೆ ಕಮಲ್ ಹಾಸನ್ ಹೊಂದಾಣಿಕೆ ಮಾಡಿಕೊಳ್ಳುವ ಸಾಧ್ಯತೆ ಇರುವಂತಿದೆ ಎಂದಿದ್ದಾರೆ.

Edited By

Shruthi G

Reported By

Madhu shree

Comments