ರಮ್ಯಾ ಸಿದ್ಧತೆ: ನಿವಾಸ ಖರೀದಿ, ಹರಿದಾಡುತ್ತಿದೆ ಗುಮಾನಿ
ಮಾಜಿ ಸಂಸದೆ ರಮ್ಯಾ ಮಂಡ್ಯದಲ್ಲಿ ನಿವಾಸವೊಂದನ್ನು ಖರೀದಿ ಮಾಡಿದ್ದಾರೆ ಎಂಬ ಗುಮಾನಿಯ ಸುದ್ದಿ ಎಲ್ಲಾ ಕಡೆ ಹರಿದಾಡುತ್ತಿದೆ.
ಬೆಂಗಳೂರು: ಮಾಜಿ ಸಂಸದೆ ರಮ್ಯಾ ಮಂಡ್ಯದಲ್ಲಿ ನಿವಾಸವೊಂದನ್ನು ಖರೀದಿ ಮಾಡಿದ್ದಾರೆ ಎಂಬ ಗುಮಾನಿಯ ಸುದ್ದಿ ಎಲ್ಲಾ ಕಡೆ ಹರಿದಾಡುತ್ತಿದೆ. ಆದ್ರೆ ಸದ್ಯಕ್ಕೆ ಯಾವುದೇ ಖಚಿತ ಮಾಹಿತಿ ಹೊರ ಬಂದಿಲ್ಲ. ಮೂಲಗಳ ಪ್ರಕಾರ, ಹಿರಿಯ ಕಾಂಗ್ರೆಸ್ ನಾಯಕ ಸಾದತ್ ಅಲಿ ಖಾನ್ ಅವರ ಮಂಡ್ಯದ ನಿವಾಸವನ್ನು ಮಾಡಿ ಸಂಸದೆ ರಮ್ಯಾ ಖರೀದಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ರಮ್ಯಾ ಅವರನ್ನು ಸ್ಪರ್ಧೆಗೆ ಇಳಿಸುವ ಬಗ್ಗೆ ತೀವ್ರ ಚಿಂತನೆ ನಡೆಯುತ್ತಿದೆ. ಈ ಕಾರಣದಿಂದ ತಾವು ನವೀಕರಣಗೊಳಿಸಿರುವ ನಿವಾಸದಲ್ಲಿ ವಾಸ್ತವ್ಯ ಹೂಡಿ ರಾಜಕೀಯ ಚಟುವಟಿಕೆ ಆರಂಭಿಸಲು ರಮ್ಯಾ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ನವೆಂಬರ್ 29ರಂದು ರಮ್ಯಾ ಹುಟ್ಟು ಹಬ್ಬದ ದಿನ. ಆದ್ದರಿಂದ ಅಂದಿನ ದಿನದಂದೇ ಅವರು ಸಕ್ರೀಯ ರಾಜಕಾರಣಕ್ಕೆ ಮರಳುತ್ತಿದ್ದಾರೆ ಎಂದು ಕೇಳಿ ಬರುತ್ತಿದೆ.
Comments