ಕುಟುಂಬ ರಾಜಕಾರಣ ಅಂತ ಟೀಕಿಸುವವರಿಗೆ ಪ್ರಜ್ವಲ್ ರೇವಣ್ಣ ತಿರುಗೇಟು
ಸಿಎಂ ಸಿದ್ದರಾಮಯ್ಯ ಅವರು ತಮ್ಮ ಮಗ ಯತೀಂದ್ರ ಅವರನ್ನು ಚುನಾವಣೆಗೆ ನಿಲ್ಲಿಸುತ್ತಿದ್ದೇನೆ ಅಂತಿದ್ದಾರೆ. ಯಾರಾದರೂ ಈ ಕುರಿತು ಪ್ರಶ್ನಿಸಿದ್ದೀರ. ಅಲ್ಲದೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ರಾಘವೇಂದ್ರ ಅವರನ್ನು ಚುನಾವಣೆಯಲ್ಲಿ ನಿಲ್ಲಿಸಿದ್ದರು. ಅದು ಕುಟುಂಬ ರಾಜಕಾರಣ ಅಲ್ಲವೇ? ಎಂದು ಪ್ರಜ್ವಲ್ ರೇವಣ್ಣ ತಿರುಗೇಟು ನೀಡಿದ್ದಾರೆ.
ಯಾರೂ ಅದರ ಬಗ್ಗೆ ಮಾತನಾಡದೇ ನನ್ನ ಬಗ್ಗೆ ಮಾತ್ರ ಮಾತನಾಡುವುದು ಎಷ್ಟು ಸರಿ ಎಂದು ಹೇಳಿ ಬೇಸರ ವ್ಯಕ್ತಪಡಿಸಿದರು. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಅರಳಕುಪ್ಪೆ ಗ್ರಾಮದಲ್ಲಿ ಮಾತನಾಡಿದ ಅವರು ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ಮಂದಿಗೆ ತಿರುಗೇಟು ನೀಡಿದರು. ಇವತ್ತು ನನ್ನ ಬಗ್ಗೆ ಮಾಧ್ಯಮಗಳು ಒತ್ತು ನೀಡುತ್ತಿದ್ದಾರೆ. ರೈತರ ಸಂಕಷ್ಟ ಓಡಿಸಬೇಕು ಅಂದರೆ ಕುಮಾರಣ್ಣ ಅಧಿಕಾರಕ್ಕೆ ಬರಬೇಕು. ಕುಮಾರಣ್ಣ ಮತ್ತು ದೇವೇಗೌಡರು ಚುನಾವಣೆಗೆ ನಿಲ್ಲು ಅಂದರೆ ನಿಲ್ಲುತ್ತೇನೆ, ಇಲ್ಲದಿದ್ರೆ ನಿಲ್ಲೋದಿಲ್ಲ ಎಂದು ಪ್ರಜ್ವಲ್ ರೇವಣ್ಣ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಪರ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ.
Comments