ಕಡಲೇಕಾಯಿ,ಜೋಳಕ್ಕೆ ಬೆಂಬಲ ಬೆಲೆ ಘೋಷಿಸಿ ಸರ್ಕಾರಕ್ಕೆ ಎಚ್ ಡಿಕೆ ಒತ್ತಾಯ
ಕಡಲೇಕಾಯಿ ಹಾಗೂ ಗೋವಿನ ಜೋಳ ಬೆಳೆ ಕಟಾವಿಗೆ ಬಂದಿದ್ದು, ಮಾರುಕಟ್ಟೆಯಲ್ಲಿ ದಿಢೀರ್ ಬೆಲೆ ಕುಸಿದಿದೆ. ಹೀಗಿದ್ದರೂ ರಾಜ್ಯ ಸರ್ಕಾರ ಇನ್ನೂ ಕೇಂದ್ರ ಸರ್ಕಾರಕ್ಕೆ ನಿಯೋಗ ತೆಗೆದುಕೊಂಡು ಹೋಗುವ ಮಾತನಾಡುತ್ತಿದೆ. ಆದ್ದರಿಂದ ಮೊದಲು ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ರೈತರು ಬೆಳೆದಿರುವ ಕಡಲೆಕಾಯಿ ಮತ್ತುಗೋವಿನ ಜೋಳಕ್ಕೆ ತಕ್ಷಣ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ರೈತರು ತಾವು ಬೆಳೆದ ಬೆಳೆಯನ್ನು ಕಡಿಮೆ ದರಕ್ಕೆ ಮಾರುವ ಅನಿವಾರ್ಯತೆ ಎದುರಾಗಿದೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಈಗಾಗಲೇ ಕಡಲೇಕಾಯಿ ಹಾಗೂ ಗೋವಿನ ಜೋಳ ಬೆಳೆ ಕಟಾವಿಗೆ ಬಂದಿದ್ದು, ಮಾರುಕಟ್ಟೆಯಲ್ಲಿ ದಿಢೀರ್ ಬೆಲೆ ಕುಸಿದಿದೆ.ಆದ್ದರಿಂದ ಮೊದಲು ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.
Comments