ದಿನದಿಂದ ದಿನಕ್ಕೆ ಜೆಡಿಎಸ್ ಶಕ್ತಿ ಹೆಚ್ಚುತ್ತಿದೆ
ಕಾಂಗ್ರೆಸ್ ಪಕ್ಷದಲ್ಲಿದ್ದ ಕೆ.ಸುರೇಶ್ ಗೌಡ ಮತ್ತು ಎಲ್.ಆರ್.ಶಿವರಾಮೇಗೌಡ ಜೆಡಿಎಸ್ ಸೇರಿದ್ದಾರೆ. ಮಂಡ್ಯ ಸಂಸದ ಸ್ಥಾನವೂ ಜೆಡಿಎಸ್ ಕೈಯಲ್ಲಿ ಇದೆ. ದಿನದಿಂದ ದಿನಕ್ಕೆ ಜೆಡಿಎಸ್ ಜಿಲ್ಲೆಯಲ್ಲಿ ತನ್ನ ಶಕ್ತಿಯನ್ನು ಹೆಚ್ಚಿಸಿಕೊಳ್ಳುತ್ತಿದೆ.
ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಎಚ್.ಡಿ.ಕುಮಾರಸ್ವಾಮಿ ದಾಳ ಉರುಳಿಸಿದ್ದು, ಬಂಡಾಯ ಶಾಸಕ ರಮೇಶ ಬಂಡಿಸಿದ್ದೇಗೌಡ ಅವರಿಗೆ ಟಾಂಗ್ ನೀಡಿದ್ದಾರೆ. ರವೀಂದ್ರ ಶ್ರೀಕಂಠಯ್ಯ ಅವರ ಮನೆಗೆ ಭೇಟಿ ಕೊಟ್ಟು, ಪಕ್ಷಕ್ಕೆ ಆಹ್ವಾನ ನೀಡಿದ್ದಾರೆ. ರವೀಂದ್ರ ಶ್ರೀಕಂಠಯ್ಯ ಅವರು ಜೆಡಿಎಸ್ ಸೇರುವುದು ಬಹುತೇಕ ಖಚಿತವಾಗಿದೆ. ನಾಗಮಂಗಲ ಶಾಸಕ ಚೆಲುವರಾಯಸ್ವಾಮಿ ಕಾಂಗ್ರೆಸ್ ಸೇರುವುದು ಖಚಿತವಾಗಿದೆ. ಅಂಬರೀಶ್, ರಮ್ಯಾ ಜಟಾಪಟಿಯಿಂದಾಗಿ ಕಾಂಗ್ರೆಸ್ ಕೈತಪ್ಪುತ್ತಿರುವ ಜಿಲ್ಲೆಯ ರಾಜಕಾರಣವನ್ನು ಚೆಲುವರಾಯಸ್ವಾಮಿ ತಮ್ಮ ಹಿಡಿತಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಇದೆ.
Comments