ಮಾಲಕ ರೆಡ್ಡಿ ಮನವೊಲಿಸುವಲ್ಲಿ ಸಿಎಂ ಸಿದ್ದರಾಮಯ್ಯ ವಿಫಲ
ಯಾದಗಿರಿ ಕ್ಷೇತ್ರದ ಶಾಸಕ ಡಾ.ಎ.ಬಿ. ಮಾಲಕ ರೆಡ್ಡಿ ಕಾಂಗ್ರೆಸ್ ಪಕ್ಷ ತೊರೆಯುವುದು ಖಚಿತವಾಗಿದೆ. ಶಾಸಕರ ಮನವೊಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ ಮಾತುಕತೆಯೂ ವಿಫಲವಾಗಿದೆ.
ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ.ಎ.ಬಿ. ಮಾಲಕ ರೆಡ್ಡಿ ಅವರ ಜೊತೆ ಮಾತುಕತೆ ನಡೆಸಿದರು. ಆದರೆ, 'ಕಾಂಗ್ರೆಸ್‌ಗೆ ರಾಜೀನಾಮೆ ಕೊಟ್ಟು ಹೋಗುವೆ' ಎಂದು ಮಾಲಕ ರಡ್ಡಿ ಸಿದ್ದರಾಮಯ್ಯ ಸಮ್ಮುಖದಲ್ಲಿಯೇ ಹೇಳಿ ಬಂದಿದ್ದಾರೆ.ಶಾಸಕನಾಗಿ ಇದೇ ನನ್ನ ಕೊನೆ ಅವಧಿ. ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ. ನನ್ನನ್ನು ತಡೆಯುವ ಯತ್ನ ಮಾಡಬೇಡಿ' ಎಂದು ಮಾಲಕ ರಡ್ಡಿ ಸಿದ್ದರಾಮಯ್ಯ ಅವರಿಗೆ ಹೇಳಿ ಸಭೆಯಿಂದ ಹೊರ ಬಂದಿದ್ದಾರೆ.
ಯಾದಗಿರಿ ಕ್ಷೇತ್ರದ ಶಾಸಕ ಎ.ಬಿ.ಮಾಲಕ ರೆಡ್ಡಿ ಮತ್ತು ಅಫಜಲಪುರ ಕ್ಷೇತ್ರದ ಶಾಸಕ ಮಾಲೀಕಯ್ಯ ಗುತ್ತೇದಾರ್ ಬಿಜೆಪಿ ಅಥವ ಜೆಡಿಎಸ್ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಇಬ್ಬರು ಶಾಸಕರು ಪಕ್ಷ ತೆರೆದರೆ ಕಾಂಗ್ರೆಸ್‌ಗೆ ಯಾದಗಿರಿ ಜಿಲ್ಲೆಯಲ್ಲಿ ಹಿನ್ನಡೆ ಉಂಟಾಗಲಿದೆ.ಇಷ್ಟು ವರ್ಷ ಕಾಂಗ್ರೆಸ್ ಪಕ್ಷದಲ್ಲಿದ್ದೀರಿ. ಸಚಿವರೂ ಆಗಿದ್ದೀರಿ, ಚುನಾವಣೆ ಹತ್ತಿರವಾಗುತ್ತಿರುವ ಸಂದರ್ಭದಲ್ಲಿ ಪಕ್ಷ ಬಿಟ್ಟು ಹೋಗುವ ನಿರ್ಧಾರ ಬೇಡ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಆದರೆ, ಎ.ಬಿ.ಮಾಲಕ ರೆಡ್ಡಿ ಅದನ್ನು ಒಪ್ಪಿಲ್ಲ.
ಐದು ಬಾರಿ ಗೆದ್ದು ಶಾಸಕನಾದೆ. ನಿಮ್ಮ ಅವಧಿಯಲ್ಲಿ ಸಾಕಷ್ಟು ಅವಮಾನ ಎದುರಿಸಿದ್ದೇನೆ. ಇನ್ನಷ್ಟು ಕಾಲ ಅದನ್ನು ಸಹಿಸಿಕೊಂಡು ಹೇಗೆ ಇರಲಿ?' ಪಕ್ಷ ತೊರೆಯುವ ನಿರ್ಧಾರ ಮಾಡಿದ್ದೇನೆ. ಹಿಂದೆ ಸರಿಯುವ ಪ್ರಶ್ನೆ ಇಲ್ಲ' ಎಂದು ಮಾಲಕ ರೆಡ್ಡಿ ಸಿಎಂ ಮುಂದೆ ಅಸಮಾಧಾನ ಹೊರಹಾಕಿದ್ದಾರೆ.
Comments