ಚನ್ನಪಟ್ಟಣ ಕ್ಷೇತ್ರದ ಸ್ಪರ್ಧೆ ಬಗ್ಗೆ ಅನಿತಾ ಕುಮಾರಸ್ವಾಮಿ ಪ್ರತಿಕ್ರಿಯೆ

ಚನ್ನಪಟ್ಟಣ ಕ್ಷೇತ್ರದಿಂದ 2018ರ ವಿಧಾನಸಭೆ ಚುನಾವಣೆಗೆ ಅನಿತಾ ಕುಮಾರಸ್ವಾಮಿ ಸ್ಪರ್ಧೆ ಮಾಡಲಿದ್ದಾರೆ ಎಂದು ಸುದ್ದಿಯಾಗಿತ್ತು. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಅನಿತಾ ಕುಮಾರಸ್ವಾಮಿ, 'ನನ್ನ ಸ್ಪರ್ಧೆಯ ಬಗ್ಗೆ ಪಕ್ಷದ ವರಿಷ್ಠರಾದ ಎಚ್.ಡಿ.ದೇವೇಗೌಡರು ಹಾಗೂ ನನ್ನ ಪತಿ ಎಚ್.ಡಿ.ಕುಮಾರಸ್ವಾಮಿಯವರು ತೀರ್ಮಾನ ಮಾಡುತ್ತಾರೆ,' ಎಂದು ಹೇಳಿದರು.
ನನಗೆ ರಾಜಕೀಯದಷ್ಟೇ ನನ್ನ ಸಂಸಾರ ಮುಖ್ಯ. ನಮ್ಮ ಯಜಮಾನರು ಖುಷಿಯಿಂದ ಯಾವುದೇ ತೀರ್ಮಾನ ತೆಗೆದುಕೊಂಡರೂ ಅದಕ್ಕೆ ನಾನು ಬದ್ಧ ಎಂದು ರಾಮನಗರದಲ್ಲಿ ಜೆಡಿಎಸ್ ನಾಯಕಿ ಅನಿತಾ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.ರಾಮನಗರದಲ್ಲಿ ವಿವಿಧ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ಅವರು ಮಾಧ್ಯಮಗಳಿಗೆ ಈ ಹೇಳಿಕೆ ನೀಡಿದ್ದಾರೆ.ಚನ್ನಪಟ್ಟಣ ಕ್ಷೇತ್ರದ ಮತದಾರರು, ಜೆಡಿಎಸ್ ಕಾರ್ಯಕರ್ತರು ಮತ್ತು ಮುಖಂಡರು ನನ್ನ ಮೇಲೆ ಇಟ್ಟಿರುವ ಅಭಿಮಾನಕ್ಕೆ ನಾನು ಚಿರಋಣಿ. ಆದರೆ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ,' ಎಂದು ಹೇಳುವ ಮೂಲಕ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸುವ ವಿಚಾರಕ್ಕೆ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಉತ್ತರಿಸಿದ್ದಾರೆ.
Comments