ಆರು ಸ್ಥಾನಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿದ ಬಿಜೆಪಿ

ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ರಾಜ್ಯ ವಿಧಾನ ಪರಿಷತ್ತಿನ ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ನಿರ್ಧರಿಸಿತು. ನೈರುತ್ಯ ಪದವೀಧರರ ಕ್ಷೇತ್ರದಿಂದ ಆಯನೂರು ಮಂಜುನಾಥ್, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಗಣೇಶ್ ಕಾರ್ಣಿಕ್, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಬಿ.ನಿರಂಜನ್ ಮೂರ್ತಿ, ಈಶಾನ್ಯ ಪದವೀಧರರ ಕ್ಷೇತ್ರದಿಂದ ಕೆ.ಬಿ.ಶ್ರೀನಿವಾಸ್ ಅವರನ್ನು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಆಯ್ಕೆ ಮಾಡಿದೆ.
ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಹಾಲನೂರು ಎಸ್.ಲೇಪಾಕ್ಷಿ ಮತ್ತು ಬೆಂಗಳೂರು ಪದವೀಧರರ ಕ್ಷೇತ್ರದಿಂದ ಎ.ದೇವೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಮಾರ್ಗದರ್ಶನದಂತೆ ದೆಹಲಿಯ ಅಶೋಕ್ ರಸ್ತೆಯಲ್ಲಿರುವ ಪಕ್ಷದ ಕೇಂದ್ರ ಕಚೇರಿಯಲ್ಲಿ ಅಭ್ಯರ್ಥಿಗಳನ್ನು ನಿನ್ನೆ ಆಯ್ಕೆ ಮಾಡಲಾಯಿತು. ಕರ್ನಾಟಕ ವಿಧಾನಪರಿಷತ್ತಿನ ಎಲ್ಲಾ ಆರು ಸ್ಥಾನಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಲಾಗಿದ್ದು ಇದು ವೆಬ್ ಸೈಟ್ ನಲ್ಲಿದೆ ಎಂದು ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಕಾರ್ಯದರ್ಶಿ ಮತ್ತು ಕೇಂದ್ರ ಸಚಿವ ಜೆ.ಪಿ.ನಡ್ಡಾ ತಿಳಿಸಿದ್ದಾರೆ. ಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ವಿದೇಶಾಂಗ ವ್ಯವಹಾರಗಳ ಖಾತೆ ಸಚಿವೆ ಸುಷ್ಮಾ ಸ್ವರಾಜ್ ಮತ್ತು ಬಿಜೆಪಿ ಚುನಾವಣಾ ಸಮಿತಿಯ ಇತರ ಸದಸ್ಯರು ಹಾಜರಿದ್ದರು.
Comments