ಮುಖ್ಯ ಚುನಾವಣಾಧಿಕಾರಿಯಾಗಿ ಸಂಜೀವ್ ಕುಮಾರ್ ರವರು ಅಧಿಕಾರ ಸ್ವೀಕಾರ
ಐಎಎಸ್ ಅಧಿಕಾರಿಯಾಗಿರುವ ಸಂಜೀವ್ ಕುಮಾರ್ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇಂದಿನಿಂದಲೇ ಅವರು ರಾಜ್ಯ ಮುಖ್ಯ ಚುನಾವಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ರಾಜ್ಯದ ನೂತನ ಮುಖ್ಯ ಚುನಾವಣಾಧಿಕಾರಿ ಆಗಿ ಸಂಜೀವ್ ಕುಮಾರ್ ನೇಮಕವಾಗಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಗೆ ಆರು ತಿಂಗಳು ಇರುವ ಸಮಯದಲ್ಲಿ ಕಳೆದ ಐದು ವರ್ಷಗಳಿಂದ ಚುನಾವಣಾಧಿಕಾರಿ ಆಗಿ ಕಾರ್ಯ ನಿರ್ವಹಿಸಿದ್ದ ಅನಿಲ್ ಕುಮಾರ್ ಝಾ ಅವರನ್ನು ವರ್ಗಾವಣೆ ಮಾಡಲಾಗಿದೆ. ಭಾರತೀಯ ಚುನಾವಣಾ ಆಯೋಗ ಈ ಸಂಬಂಧ ರಾಜ್ಯ ಸರ್ಕಾರದ ಜತೆ ಮಾತುಕತೆ ನಡೆಸಿದ ನಂತರ ಜನಪ್ರತಿನಿಧಿ ಕಾಯ್ದೆ 1950ರ ಸೆಕ್ಷನ್ 13ಎ ಅನ್ವಯ ಸಂಜೀವ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
Comments