ಖಾಸಗಿ ವೈದ್ಯರ ಜತೆ ಸಿಎಂ ಸಂಧಾನ ಸಭೆ ಯಶಸ್ವಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಖಾಸಗಿ ವೈದ್ಯರ ಜತೆ ನಡೆಸಿದ ಸಭೆ ಯಶಸ್ವಿಯಾಗಿದೆ. ಇದರೊಂದಿಗೆ ಮುಷ್ಕರ ವಾಪಸ್ ಪಡೆಯಲು ಖಾಸಗಿ ವೈದ್ಯರು ನಿರ್ಧರಿಸುವ ಮೂಲಕ ರಾಜ್ಯ ಸರ್ಕಾರ ಮತ್ತು ಖಾಸಗಿ ವೈದ್ಯರ ನಡುವಿನ ಹಗ್ಗಜಗ್ಗಾಟಕ್ಕೆ ತೆರೆ ಬಿದ್ದಂತಾಗಿದೆ.
ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ತಿದ್ದುಪಡಿ ಮಸೂದೆ ವಿರೊಧಿಸಿ ವೈದ್ಯರು ಮುಷ್ಕರ ನಡೆಸುತ್ತಿರುವುದನ್ನು ಪ್ರಶ್ನಿಸಿ ವಕೀಲ ಎನ್.ಪಿ.ಅಮೃತೇಶ್ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ವೇಳೆ ಕೋರ್ಟ್ ಸರ್ಕಾರ ಮತ್ತು ವೈದ್ಯರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.ಖಾಸಗಿ ವೈದ್ಯರು ನಡೆಸುತ್ತಿರುವ ಧರಣಿಯನ್ನು ಮೊಟಕುಗೊಳಿಸಿ ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.
Comments