ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಿಂದ ಭರವಸೆ ಮಹಾ ಪೂರಾ!
ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರು, ನೇಕಾರರು ಮತ್ತು ಬಡವರ ಜನತಾ ಮನೆಯ ಸಾಲವನ್ನು ಸಂಪೂರ್ಣ ಮನ್ನಾ ಮಾಡಲಾಗುವುದು ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್.ಹೆಚ್.ದೇವರಾಜ್ ಭರವಸೆ ನೀಡಿದರು.
ಅರಿಶಿನಗುಪ್ಪೆ ಗ್ರಾಮದಲ್ಲಿ ಜೆಡಿಎಸ್ ಏರ್ಪಡಿಸಿದ್ದ “ಕುಮಾರಣ್ಣನ ನಡೆ ರೈತರ ಮನೆಕಡೆ” ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದರು. ಜೆಡಿಎಸ್ ರೈತರ ಪರವಾದ ಪಕ್ಷ, ಅದರ ವರಿಷ್ಠ ಹೆಚ್.ಡಿ.ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರೈತರ ಪರ ನಿಲುವು ಹೊಂದಿದ್ದಾರೆ ಸದಾಕಾಲ ಕೃಷಿಕರ ಪರವಾಗಿ ಹೋರಾಟ ನಡೆಸಿದ್ದಾರೆ ಎಂದ ಅವರು ಈ ಹಿಂದೆ ರಾಜ್ಯದಲ್ಲಿ ಜೆಡಿಎಸ್ ಅಧಿಕಾರದಲ್ಲಿದ್ದಾಗ ರೈತರಿಗಾಗಿ ರೂಪಿಸಿದ ಕಾರ್ಯಕ್ರಮಗಳೇ ಇದಕ್ಕೆ ಸಾಕ್ಷಿ ಎಂದರು.
ಕಾಂಗ್ರೆಸ್ ಮತ್ತು ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳು, ರಾಜ್ಯದಲ್ಲಿ ಹಿಂದೆಂದೂ ಕಂಡರಿಯದ ಬರಗಾಲದಿಂದಾಗಿ ರೈತಾಪಿ ವರ್ಗ ಕಂಗೆಟ್ಟಿದೆ, ನೂರಾರು ಜನ ಕೃಷಿಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಈ ಸಂದರ್ಭದಲ್ಲಿ ಅವರ ನೆರವಿಗೆ ಧಾವಿಸುವುದನ್ನು ಬಿಟ್ಟು ಈ ಎರಡೂ ಪಕ್ಷಗಳು ರೈತರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿವೆ, ಕ್ಷುಲ್ಲಕ ರಾಜಕಾರಣ ಮತ್ತು ಭ್ರಷ್ಟಾಚಾರದಲ್ಲಿ ನಿರತವಾಗಿವೆ ಎಂದು ಆರೋಪಿಸಿದರು
ಇದೇ ವೇಳೆ ವಿವಿಧ ಪಕ್ಷಗಳ 80 ಕ್ಕೂ ಹೆಚ್ಚು ಕಾರ್ಯಕರ್ತರು ಜೆಡಿಎಸ್‍ಗೆ ಸೇರ್ಪಡೆಗೊಂಡರು, ಪಕ್ಷದ ಬಾವುಟ ನೀಡಿ ಅವರನ್ನು ಸ್ವಾಗತಿಸಲಾಯಿತು.
Comments