ಉಡುಪಿ ಶ್ರೀಕೃಷ್ಣ ಮಠಕ್ಕೆ ಹೋಗಲ್ಲ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಉಡುಪಿ ಶ್ರೀಕೃಷ್ಣ ಮಠಕ್ಕೆ ಹೋಗುವ ವಿಷಯದಲ್ಲಿ ಹಠ ಮುಂದುವರಿಸಿದ್ದಾರೆಯೇ ಎಂಬುದರ ಬಗ್ಗೆ ರಾಜಕೀಯ ವಲಯದಲ್ಲಿ ಸುದ್ದಿ ಹರಡಿದೆ. ಸಿಎಂ ಸಿದ್ದರಾಮಯ್ಯ ಉಡುಪಿ ಮಠಕ್ಕೆ ಯಾಕೆ ಕಾಲಿಡಲ್ಲ? ಅಲ್ಲಿಗೆ ಅವರು ಯಾಕೆ ಭೇಟಿ ನೀಡುವುದಿಲ್ಲ ಎಂಬುದರ ಬಗ್ಗೆ ಚರ್ಚೆಗೆ ಗ್ರಾಸವಾಗಿದೆ.
ಇವತ್ತು ಸಿಎಂ ಸಿದ್ದರಾಮಯ್ಯ ಶ್ರೀಕೃಷ್ಣ ಮಠದಿಂದ ಇನ್ನೂರು ಮೀಟರ್ ದೂರವಿರುವ ಕೂಸಮ್ಮ ಶಂಭು ಶೆಟ್ಟಿ ಹಾಜಿ ಅಬ್ದುಲ್ಲಾ ಆಸ್ಪತ್ರೆಯನ್ನು ಉದ್ಘಾಟನೆ ಮಾಡಿದ್ರು. ಈ ವೇಳೆ ಮಾಧ್ಯಮದವರು ಶ್ರೀಕೃಷ್ಣ ಮಠಕ್ಕೆ ಹೋಗುವುದಿಲ್ಲವೇ ಎಂದು ಪ್ರಶ್ನೆ ಕೇಳಿದ್ರು. ಈ ವೇಳೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ನಾನು ಈ ಹಿಂದೆ ಮಠಕ್ಕೆ ಹೋಗಿದ್ದೆ, ಆದರೆ ಈಗ ಹೋಗಲ್ಲ, ಮಠದಿಂದ ಈ ಬಾರಿ ನನಗೆ ಆಹ್ವಾನವು ಇಲ್ಲ ಎಂದರು. ಪೇಜಾವರ ಶ್ರೀಗಳ ಜತೆಗೆ ನನಗೆ ವೈಯಕ್ತಿಕವಾಗಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ನಾನು ಆರೂವರೆ ಕೋಟಿ ಜನರ ಜತೆ ಚೆನ್ನಾಗಿಯೇ ಇದ್ದೇನೆ. ಬಸವಣ್ಣನವರ ವಚನವನ್ನು ಸಿಎಂ ಪುನರುಚ್ಛರಿಸಿ ಉಡುಪಿಯಿಂದ ತೆರಳಿದರು.
Comments