ಜೆಡಿಎಸ್ ಶಾಸಕರನ್ನು ಸೆಳೆಯಲು ವಿಪಕ್ಷಗಳಿಂದ ರಣತಂತ್ರ
ಬೆಂಗಳೂರು ಪದವೀಧರ ಕ್ಷೇತ್ರದಿಂದ ಮೂಲ ಬಿಜೆಪಿಯವರಿಗೆ ಟಿಕೆಟ್ ಕೊಡಬೇಕು ಎಂಬ ಬೇಡಿಕೆ ಇತ್ತು. ಗೆಲ್ಲಲೇಬೇಕು ಎಂಬ ಕಾರಣಕ್ಕೆ ಜೆಡಿಎಸ್‌ನ ಅ. ದೇವೇಗೌಡ ಅವರನ್ನು ಕರೆತಂದು ಟಿಕೆಟ್ ನೀಡಲಾಯಿತು. ಇದೇ ನೀತಿ ವಿಧಾನಸಭಾ ಕ್ಷೇತ್ರಗಳಿಗೂ ಅನ್ವಯವಾಗಲಿದೆ’ ಎಂದೂ ಬಿಜೆಪಿ ಪಕ್ಷದ ಹಿರಿಯ ನಾಯಕರೊಬ್ಬರು ವಿವರಿಸಿದರು.
ಗುಜರಾತ್ ಚುನಾವಣೆ ಫಲಿತಾಂಶ ನೋಡಿ, ನಂತರ ತೀರ್ಮಾನಿಸುವುದಾಗಿ ಕೆಲವರು ಹೇಳಿದ್ದಾರೆ. ಹೀಗಾಗಿ ಜೆಡಿಎಸ್ ಶಾಸಕರ ಕಡೆ ಹೆಚ್ಚಿನ ಗಮನ ಕೇಂದ್ರೀಕರಿಸಿದ್ದೇವೆ’ ಎಂದು ಬಿಜೆಪಿ ನಾಯಕರು ತಿಳಿಸಿದರು. ಪುನರಾಯ್ಕೆಯಾಗುವ ಶಾಸಕರು ಎಂದು ಜೆಡಿಎಸ್ ಲೆಕ್ಕ ಹಾಕಿರುವ ಅರಸೀಕರೆಯ ಕೆ.ಎಂ. ಶಿವಲಿಂಗೇಗೌಡ, ಶಿವಮೊಗ್ಗ ಗ್ರಾಮಾಂತರದ ಶಾರದಾ ಪೂರ್ಯಾನಾಯ್ಕ್, ನೆಲಮಂಗಲದ ಕೆ. ಶ್ರೀನಿವಾಸ ಮೂರ್ತಿ, ದೇವನಹಳ್ಳಿಯ ಪಿಳ್ಳ ಮುನಿಶ್ಯಾಮಪ್ಪ, ರಾಯಚೂರಿನ ಶಿವರಾಜ ಪಾಟೀಲ, ಶಿಡ್ಲಘಟ್ಟದ ಎಂ. ರಾಜಣ್ಣ, ಲಿಂಗಸಗೂರಿನ ಮಾನಪ್ಪ ವಜ್ಜಲ್ ಅವರನ್ನು ಕರೆತರುವ ಲೆಕ್ಕಾಚಾರ ಬಿಜೆಪಿಯವರದ್ದಾಗಿತ್ತು. ‘ಶಾಸಕರ ಜತೆ ಮಾತುಕತೆ ನಡೆಸಿದ ನಾಯಕರು, ಬಿಜೆಪಿ ಸರ್ಕಾರ ಬಂದರೆ ಸಚಿವ ಸ್ಥಾನ ಅಥವಾ ನಿಗಮ, ಮಂಡಳಿ ಅಧ್ಯಕ್ಷ ಸ್ಥಾನ ನೀಡುವ ಆಮಿಷ ಒಡ್ಡಿದ್ದಾರೆ’ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
‘ಹಾಸನ ಜಿಲ್ಲೆಯಲ್ಲಿ ಎಚ್.ಡಿ. ರೇವಣ್ಣ ಪ್ರಬಲವಾಗಿರುವವರೆಗೆ ಅದೇ ಜಿಲ್ಲೆಯನ್ನು ಪ್ರತಿನಿಧಿಸುವ ನಿಮಗೆ ಮಂತ್ರಿ ಸ್ಥಾನ ಸಿಗುವುದಿಲ್ಲ. ನಮ್ಮ ಪಕ್ಷಕ್ಕೆ ಬಂದರೆ ಮಂತ್ರಿಯಾಗುವುದು ಖಚಿತ ಎಂದು ಶಿವಲಿಂಗೇಗೌಡ ಅವರನ್ನು ಒಲಿಸಲು ಬಿಜೆಪಿ ನಾಯಕರು ಯತ್ನಿಸಿದರು. ಮಂತ್ರಿ ಸ್ಥಾನಕ್ಕಿಂತ ಪಕ್ಷವೇ ಮುಖ್ಯ, ನಿಮ್ಮ ಸಿದ್ಧಾಂತ ನಮಗೆ ಒಗ್ಗುವುದಿಲ್ಲ ಎಂದು ಶಿವಲಿಂಗೇಗೌಡ ಸ್ಪಷ್ಟವಾಗಿ ತಿಳಿಸಿದರು’ ಎಂದು ಮೂಲಗಳು ಹೇಳಿವೆ. ‘ಕೆಲವರು ಬಿಜೆಪಿಗೆ ಬರುವುದಿಲ್ಲ ಎಂದು ಹೇಳಿದ್ದಾರೆ. ಕೆಲವರು, ಗುಜರಾತ್ ಚುನಾವಣೆ ಫಲಿತಾಂಶದ ಬಳಿಕ ತೀರ್ಮಾನ ಮಾಡುವುದಾಗಿ ತಿಳಿಸಿದ್ದಾರೆ. ಕಾದುನೋಡುತ್ತೇವೆ’ ಎಂದು ಬಿಜೆಪಿ ನಾಯಕರು ತಿಳಿಸಿದರು. ಪಕ್ಷಕ್ಕೆ ಬರುವಂತೆ ಬಿಜೆಪಿ, ಕಾಂಗ್ರೆಸ್‌ನವರು ಪ್ರಯತ್ನ ಪಡುತ್ತಲೇ ಇದ್ದಾರೆ. ನಾನು ಪಕ್ಷ ಬಿಟ್ಟು ಬರುವುದಿಲ್ಲ ಎಂದು ಕೆ.ಎಂ. ಶಿವಲಿಂಗೇಗೌಡ, ಜೆಡಿಎಸ್ ಶಾಸಕ ಹೇಳಿದ್ದಾರೆ. ಅಂತಹ ಯಾವುದೇ ಚಿಂತನೆ ಸದ್ಯಕ್ಕಿಲ್ಲ. ಪ್ರಚಾರ ಅಷ್ಟೆ. ಪಕ್ಷದಲ್ಲೇ ಇರುತ್ತೇನೆ ಎಂದು ಮಾನಪ್ಪ ವಜ್ಜಲ್, ಜೆಡಿಎಸ್ ಶಾಸಕ ತಿಳಿಸಿದರು
Comments