ಬಿಜೆಪಿ ತನ್ನ 28 ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟಿಸಿದೆ
ಸತತ 22 ವರ್ಷಗಳಿಂದ ಅಧಿಕಾರದಲ್ಲಿರುವ ಬಿ.ಜೆ.ಪಿ. ಈ ಬಾರಿ ಹಾಲಿ 121 ಶಾಸಕರಲ್ಲಿ 35 ಮಂದಿಗೆ ಟಿಕೆಟ್ ನಿರಾಕರಿಸಲಿದೆ. ಜೊತೆಗೆ 6 ಮಂದಿ ಸಚಿವರಿಗೂ ಸ್ಪರ್ಧೆಗೆ ಅವಕಾಶ ನೀಡದಿರಲು ತೀರ್ಮಾನಿಸಲಾಗಿದೆ ಎಂಬ ಸುದ್ದಿಯಿದೆ.
ಆಡಳಿತಾರೂಢ ಬಿಜೆಪಿ ತನ್ನ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. 36 ಅಭ್ಯರ್ಥಿಗಳ ಹೆಸರಿರುವ ಪಟ್ಟಿ ಪ್ರಕಟಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಮೊದಲ ಪಟ್ಟಿಯಲ್ಲಿ ಮುಖ್ಯಮಂತ್ರಿ ವಿಜಯ್ ರೂಪಾನಿ, ಡಿಸಿಎಂ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಸೇರಿದಂತೆ ಪ್ರಮುಖರಿದ್ದ 70 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿತ್ತು. ಶನಿವಾರದಂದು 36 ಮಂದಿ ಅಭ್ಯರ್ಥಿಗಳಿರುವ ಎರಡನೇ ಪಟ್ಟಿ ಪ್ರಕಟವಾಗಿತ್ತು. ಸತತ 22 ವರ್ಷಗಳಿಂದ ಅಧಿಕಾರದಲ್ಲಿರುವ ಬಿ.ಜೆ.ಪಿ. ಈ ಬಾರಿ ಹಾಲಿ 121 ಶಾಸಕರಲ್ಲಿ 35 ಮಂದಿಗೆ ಟಿಕೆಟ್ ನಿರಾಕರಿಸಲಿದೆ. ಜೊತೆಗೆ 6 ಮಂದಿ ಸಚಿವರಿಗೂ ಸ್ಪರ್ಧೆಗೆ ಅವಕಾಶ ನೀಡದಿರಲು ತೀರ್ಮಾನಿಸಲಾಗಿದೆ ಎಂಬ ಸುದ್ದಿಯಿದೆ.ಗುಜರಾತ್ ವಿಧಾನಸಭೆಯ 89 ಕ್ಷೇತ್ರಗಳಿಗೆ ಡಿಸೆಂಬರ್ 9ರಂದು ಮೊದಲ ಹಂತದ ಮತದಾನ ನಡೆಯಲಿದೆ. ಎರಡನೇ ಹಂತದ ಮತದಾನ 93 ಕ್ಷೇತ್ರಗಳಿಗೆ ಡಿಸೆಂಬರ್ 14ರಂದು ನಡೆಯಲಿದೆ. 182 ವಿಧಾನಸಭಾ ಕ್ಷೇತ್ರಗಳ ಗುಜರಾತ್ ವಿಧಾನಸಭೆಗೆ ಡಿಸೆಂಬರ್ 18ರಂದು ಮತಎಣಿಕೆ ನಡೆಯಲಿದೆ.
Comments