ಬೆಂಗಳೂರಿನಿಂದ ರಮ್ಯಾರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್
ಕಾಂಗ್ರೆಸ್ ನ ಸಾಮಾಜಿಕ ಜಾಲತಾಣದ ಜವಾಬ್ದಾರಿ ವಹಿಸಿಕೊಂಡ ಬಳಿಕ ರಮ್ಯಾ ಮತ್ತೆ ಪ್ರಚಾರಕ್ಕೆ ಬಂದಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಕಾಂಗ್ರೆಸ್ ನಾಯಕರ ಗಮನಸೆಳೆದಿರುವ ರಮ್ಯಾ ಅವರನ್ನು ಬಳಸಿಕೊಂಡು ಯುವಜನಾಂಗವನ್ನು ಸೆಳೆಯಲು ಕಾಂಗ್ರೆಸ್ ನಿರ್ಧರಿಸಿದೆ.
ನಗರದ ಮತದಾರರನ್ನು ಸೆಳೆಯುವ ಉದ್ದೇಶದಿಂದ ಮತ್ತು ಬಿಜೆಪಿಗೆ ಪ್ರಬಲ ಪೈಪೋಟಿಯೊಡ್ಡಲು ನಿರ್ಧರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ವಿಧಾನಸಭೆ ಚುನಾವಣೆಗೆ ನಟಿ ಹಾಗೂ ರಾಜಕಾರಣಿ ರಮ್ಯಾ ಅವರನ್ನು ಕಣಕ್ಕಿಳಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ನಗರಪ್ರದೇಶದಲ್ಲಿರುವ ಸುಮಾರು 28ಕ್ಷೇತ್ರಗಳ ಪೈಕಿ 13ರಿಂದ 20 ಸ್ಥಾನಗಳನ್ನು ಭದ್ರಪಡಿಸಿಕೊಳ್ಳಲು ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ.
Comments