ರೈತರ ಬಗ್ಗೆ ಚರ್ಚೆ ನಡೆಸಬೇಕು ಎಂದು ಸಿಟ್ಟಾದ ಜೆಡಿಎಸ್ ಕಾರ್ಯಕರ್ತರು

ತೆಂಗು–ಅಡಕೆ ಬೆಳೆ ನಾಶವಾಗಿ ನೂರಾರು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. 'ಒಬ್ಬ ಗಣಪತಿ ವಿಷಯ ಇಟ್ಟುಕೊಂಡು ಬಿಜೆಪಿಯವರು ಕಲಾಪ ಹಾಳುಗೆಡುವುತ್ತಿದ್ದಾರೆ. ಉತ್ತರ ಕರ್ನಾಟಕದ ಬಗೆಗಿನ ಚರ್ಚೆಯ ದಿಕ್ಕು ತಪ್ಪಿಸುತ್ತಿದ್ದಾರೆ’ ಎಂದು ಜೆಡಿಎಸ್ ಸದಸ್ಯರು ವಾಗ್ದಾಳಿ ನಡೆಸಿದರು.
'ನೂರಾರು ರೈತರು ಮೃತಪಟ್ಟ ಬಗ್ಗೆ ಚರ್ಚೆ ನಡೆಸಲು ಅವಕಾಶ ಕೊಡಬೇಕು’ ಎಂದು ಆಗ್ರಹಿಸಿ ಕೆ.ಎಂ. ಶಿವಲಿಂಗೇಗೌಡ ನೇತೃತ್ವದಲ್ಲಿ ಜೆಡಿಎಸ್ ಸದಸ್ಯರು ಧರಣಿ ನಡೆಸಿದರು. ಸದನದಲ್ಲಿ ಕೋಲಾಹಲ ಸೃಷ್ಟಿಯಾದ್ದರಿಂದ ಸಭಾಧ್ಯಕ್ಷ ಕೆ.ಬಿ. ಕೋಳಿವಾಡ ಕಲಾಪವನ್ನು ಹತ್ತು ನಿಮಿಷ ಮುಂದೂಡಿದರು. ಇದನ್ನು ಒಪ್ಪದ ಬಿಜೆಪಿ ಸದಸ್ಯರು ಸಭಾಧ್ಯಕ್ಷರ ಪೀಠದ ಮುಂದೆ ಧರಣಿಗೆ ಮುಂದಾದರು. ಬಿಜೆಪಿ– ಕಾಂಗ್ರೆಸ್ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆಯಿತು.
Comments