ಇತಿಹಾಸ ಸೃಷ್ಟಿಸಲು ಮುಂದಾದ ಜೆಡಿಎಸ್
ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಕ್ಷೇತ್ರದ ಮುಖಂಡರ ತೀರ್ಮಾನಕ್ಕೆ ತಲೆಬಾಗುತ್ತೇನೆ. ಪಕ್ಷದಲ್ಲಿ ಯಾವುದೇ ಗೊಂದಲಗಳು ಇಲ್ಲ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಾಲೂಕಿನಿಂದ ಇತಿಹಾಸ ಸೃಷ್ಟಿಮಾಡಿ ರಾಜ್ಯದಲ್ಲಿ ಕುಮಾರ ಸ್ವಾಮಿಯವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು.
ಪ್ರತಿಪಕ್ಷದ ಶಾಸಕನಾಗಿದ್ದರೂ ಸಹ ಹೆಚ್ಚಿನ ಅನುದಾನವನ್ನು ತಾಲೂಕಿಗೆ ತರುವುದರ ಮೂಲಕ ಅಭಿವೃದ್ಧಿಪಡಿಸುತ್ತಿದ್ದೇನೆ. ಯಾರೇ ಪಕ್ಷಕ್ಕೆ ಬರಲಿ, ಅವರನ್ನು ಬರಮಾಡಿಕೊಳ್ಳುತ್ತೇನೆ. ಯುವಕರು ಪ್ರತಿ ಬೂತ್‌ಗೆ ಹೋಗಿ ಪಕ್ಷವನ್ನು ಸಂಘಟಿಸಬೇಕು. ಎಲ್ಲರನ್ನೂ ಒಗ್ಗೂಡಿಸಿ ವಿಧಾನಸಭಾ ಚುನಾವಣೆಯಲ್ಲಿ ಶಾಸಕರನ್ನು ಗೆಲ್ಲಿಸಿಕೊಳ್ಳಲು ಶ್ರಮಿಸಬೇಕು ಎಂದು ಹೇಳಿದರು.ರಾಷ್ಟ್ರೀಯ ಪಕ್ಷಗಳಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾಣಲು ಸಾಧ್ಯವಿಲ್ಲ. ಪ್ರಾದೇಶಿಕ ಪಕ್ಷದಿಂದ ಮಾತ್ರ ಸ್ಥಳೀಯ ಜ್ವಲಂತ ಸಮಸ್ಯೆ ನಿವಾರಣೆ ಸಾಧ್ಯವೆಂಬುದನ್ನು ಮನವರಿಕೆ ಮಾಡಿಕೊಡಬೇಕು ಎಂದು ಶಾಸಕ ಪಿಳ್ಳಮುನಿಶಾಮಪ್ಪ ತಿಳಿಸಿದರು.
ಪಟ್ಟಣದ ಪ್ರವಾಸಿಮಂದಿರ ಆವರಣದಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಯುವ ಜೆಡಿಎಸ್ ವತಿಯಿಂದ ಹಮ್ಮಿಕೊಂಡಿದ್ದ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ಹಾಗೂ ಯುವ ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪಕ್ಷ ತಾಯಿ ಇದ್ದಂತೆ, ಪಕ್ಷವೇ ನಮ್ಮನ್ನು ಈ ಮಟ್ಟಕ್ಕೆ ತಂದಿದೆ. ಪಕ್ಷದ ಬೆನ್ನಿಗೆ ಚೂರಿ ಹಾಕುವ ಕೆಲಸ ಎಂದಿಗೂ ಮಾಡುವುದಿಲ್ಲ. 50 ಕೋಟಿ- 100ಕೋಟಿ ರೂ. ಕೊಟ್ಟರೂ ಸಹ ಪಕ್ಷ ಬಿಡುವುದಿಲ್ಲ. ಪಕ್ಷದ ಒಬ್ಬ ನಿಷ್ಠಾವಂತ ಕಾರ್ಯಕರ್ತನಾಗಿ ಇರುತ್ತೇನೆಯೇ ಹೊರತು ಯಾವುದೇ ಪಕ್ಷಕ್ಕೆ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
Comments