ತಂತ್ರಕ್ಕೆ ಪ್ರತಿ ತಂತ್ರ ಕೊಡುತ್ತಾರಾ ಎಚ್ ಡಿ ಕೆ?
ಎಚ್.ಡಿ.ಕುಮಾರಸ್ವಾಮಿ, ರವೀಂದ್ರ ಶ್ರೀಕಂಠಯ್ಯ ಅವರಿಗೆ ಆಹ್ವಾನ ನೀಡಿದ ಬಳಿಕ ಸಿ.ಪಿ.ಯೋಗೇಶ್ವರ, ಕೆ.ಎಸ್.ನಂಜುಂಡೇಗೌಡ ಅವರನ್ನು ಬಿಜೆಪಿಗೆ ಆಹ್ವಾನಿಸಿರುವುದು ತಾಲ್ಲೂಕಿನ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಈ ಬೆಳವಣಿಗೆ ಕುರಿತು ಮಾತನಾಡಿದ ಸಿ.ಪಿ.ಯೋಗೇಶ್ವರ ಅವರು, 'ಶ್ರೀರಂಗಪಟ್ಟಣ ಕ್ಷೇತ್ರದಿಂದ ಅವರಿಗೆ ಟಿಕೆಟ್ ಕೊಡುವ ಬಗ್ಗೆ ವರಿಷ್ಠರು ನಿರ್ಧಾರ ಕೈಗೊಳ್ಳಲಿದ್ದಾರೆ' ಎಂದು ಹೇಳಿದ್ದಾರೆ.
ಯಾರು ನಂಜುಂಡೇಗೌಡ ಅಂತೀರಾ ಕೆ.ಎಸ್.ನಂಜುಂಡೇಗೌಡರು ರೈತ ಸಂಘ ರಾಜ್ಯ ಘಟಕದ ಸಂಘಟನಾ ಕಾರ್ಯದರ್ಶಿ. ಸತತ ಆರು ಬಾರಿ ಚುನಾವಣೆಗೆ ಸ್ಪರ್ಧಿಸಿ ಆರು ಬಾರಿ ಸೋತಿದ್ದಾರೆ.ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘನೆ ಮಾಡಿರುವ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. 2018ರ ಚುನಾವಣೆಗೆ ಅವರು ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.2018ರ ವಿಧಾನಸಭೆ ಚುನಾವಣೆಯಲ್ಲಿ ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯವರು ಕಾಂಗ್ರೆಸ್ ತೊರೆದಿರುವ ರವೀಂದ್ರ ಶ್ರೀಕಂಠಯ್ಯ ಅವರನ್ನು ಪಕ್ಷಕ್ಕೆ ಕರೆ ತಂದರೆ, ಇದಕ್ಕೆ ಸಿ.ಪಿ.ಯೋಗೇಶ್ವರ ತಂತ್ರ ರೂಪಿಸಿ ಕೆ.ಎಸ್.ನಂಜುಂಡೇಗೌಡ ಅವರಿಗೆ ಬಿಜೆಪಿಗೆ ಸೇರ್ಪಡೆಗೊಳ್ಳುವಂತೆ ಆಹ್ವಾನ ನೀಡಿದ್ದಾರೆ. ಇದಕ್ಕೆ ಎಚ್ ಡಿ ಕೆ ಪ್ರತಿತಂತ್ರ ರೂಪಿಸುತ್ತಾರಾ ? ಸದ್ಯ ಶ್ರೀರಂಗಪಟ್ಟಣ ಕ್ಷೇತ್ರ ಜೆಡಿಎಸ್ ವಶದಲ್ಲಿದೆ.
Comments