ಪತ್ರಕರ್ತ ರವಿ ಬೆಳಗೆರೆಯನ್ನು ಬಂಧಿಸಿ ಎಂದು ಪೊಲೀಸರಿಗೆ ವಿಧಾಸಭೆ ಸೂಚನೆ
ರವಿ ಬೆಳಗರೆ ಮತ್ತು ಯಲಹಂಕ ವಾಯ್ಸ್ ಪತ್ರಿಕೆಯ ಸಂಪಾದಕ ಅನಿಲ್ ರಾಜ್ ಅವರಿಗೆ ಹಕ್ಕು ಬಾಧ್ಯತಾ ಸಮಿತಿ ಒಂದು ವರ್ಷ ಜೈಲು ಶಿಕ್ಷೆ ಹಾಗೂ 10,000 ರೂಪಾಯಿ ದಂಡ ವಿಧಿಸಿತ್ತು. ಇದನ್ನು ಮರು ಪರಿಶೀಲಿಸುವಂತೆ ಪತ್ರಕರ್ತರಿಬ್ಬರೂ ವಿಧಾನಸಭೆ ಅಧ್ಯಕ್ಷ ಕೆ.ಬಿ. ಕೋಳಿವಾಡ ಅವರಿಗೆ ಮನವಿ ಸಲ್ಲಿಸಿದ್ದರು.
'ಹಾಯ್ ಬೆಂಗಳೂರು' ಪತ್ರಿಕೆ ಸಂಪಾದಕ ಹಾಗೂ ಹಿರಿಯ ಪತ್ರಕರ್ತ ರವಿ ಬೆಳಗೆರೆ ಹಾಗೂ ಮತ್ತೊಬ್ಬ ಪತ್ರಕರ್ತ ಹಾಗೂ ಅನಿಲ್ ರಾಜ್ ಅವರನ್ನು ಬಂಧಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭಾ ಸಚಿವಾಲಯ ಗೃಹ ಇಲಾಖೆಗೆ ಪತ್ರ ಬರೆದಿದೆ. ರವಿ ಬೆಳಗೆರೆ ಮತ್ತು ಅನಿಲ್ ರಾಜ್ ಅವರು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಗಳನ್ನು ವಿಧಾನಸಭೆ ತಿರಸ್ಕರಿಸಿದ್ದು, ಅವರಿಗೆ ಜೈಲು ಶಿಕ್ಷೆ ವಿಧಿಸಬೇಕು ಎಂಬ ಹಿಂದಿನ ನಿರ್ಣಯವನ್ನು ಎತ್ತಿ ಹಿಡಿದಿದೆ. ಸದನದ ನಿರ್ಣಯವನ್ನು ತಕ್ಷಣವೇ ಅನುಷ್ಠಾನ ಮಾಡುವಂತೆ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕ ಹಾಗೂ ಬೆಂಗಳೂರು ನಗರ ಪೊಲೀಸ್ ಕಮಿಷನರ್ಗೆ ಪತ್ರ ಬರೆಯಲಾಗಿದೆ ಎಂದು ವಿಧಾನಸಭೆ ಕಾರ್ಯದರ್ಶಿ ಎಸ್. ಮೂರ್ತಿ ತಿಳಿಸಿದ್ದಾರೆ.
Comments