ಪ್ರಧಾನಿಯಾಗಿದ್ದಾಗ ದೇಶಕ್ಕಾಗಿ ನಾನೇನು ಮಾಡಿದ್ದೇನೆ ಎನ್ನುವುದು ಮುಖ್ಯ :ಎಚ್ ಡಿಡಿ
'ಪ್ರಧಾನಿಯಾಗಿ ಎಷ್ಟು ದಿನ ಅಧಿಕಾರ ನಡೆಸಿದೆ ಎನ್ನುವುದು ಮುಖ್ಯವಲ್ಲ; ಅಧಿಕಾರದಲ್ಲಿದ್ದಾಗ ದೇಶಕ್ಕಾಗಿ ನಾನೇನು ಮಾಡಿದ್ದೇನೆ, ಈಗ ದೇಶ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎನ್ನುವುದನ್ನು ಜನರೇ ತೀರ್ಮಾನಿಸಬೇಕು’ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹೇಳಿದರು.
'ನಮ್ಮ ದೇಶವು ಒಂದು ಭಾಷೆ, ಒಂದು ಧರ್ಮ, ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾದುದಲ್ಲ. ಬಹುಧರ್ಮೀಯರು ಮತ್ತು ಬಹುಸಂಸ್ಕೃತಿಯ ದೇಶವಾಗಿದೆ. ಪ್ರಧಾನಿಯೇ ಆಗಿರಲಿ, ಮುಖ್ಯಮಂತ್ರಿಯೇ ಆಗಿರಲಿ ದೇಶ, ರಾಜ್ಯವನ್ನು ಒಗ್ಗಟ್ಟಿನಿಂದ ಮುನ್ನಡೆಸುವ ಪ್ರಾಮಾಣಿಕತೆ ಹೊಂದಿರಬೇಕು’ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಭಿಪ್ರಾಯಪಟ್ಟರು.
Comments