ಪ್ರಾದೇಶಿಕ ಪಕ್ಷಗಳನ್ನು ಬೆಂಬಲಿಸಿ ಕನ್ನಡಿಗರು ಸ್ವಾಭಿಮಾನ ತೋರಬೇಕು : ದೇವೇಗೌಡ್ರು

ತಮಿಳುನಾಡಿನ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಗಳು ನಿರ್ಣಾಯಕವಾಗಿರುವುದರಿಂದಲೇ ಪ್ರಧಾನಿ ಮೋದಿ ಡಿಎಂಕೆ ನಾಯಕ ಕರುಣಾನಿಧಿ ಅವರನ್ನು ರಾಜಕೀಯ ಹಿತಾಸಕ್ತಿಗಾಗಿ ಭೇಟಿ ಮಾಡಿ ಆಶೀರ್ವಾದ ಪಡೆಯುತ್ತಾರೆ. ಅದೇ ರೀತಿ ನಮ್ಮ ರಾಜ್ಯದಲ್ಲಿಯೂ ಪ್ರಾದೇಶಿಕ ಪಕ್ಷಗಳಿಗೆ ಶಕ್ತಿ ನೀಡುವ ಮೂಲಕ ಕನ್ನಡಿಗರು ಸ್ವಾಭಿಮಾನ ತೋರಬೇಕಿದೆ ಎಂದರು.
ರಾಜ್ಯದ ಅಭಿವೃದ್ಧಿಗೆ ಪ್ರಾದೇಶಿಕ ಪಕ್ಷದ ಅಗತ್ಯತೆ ಜನರ ಅರಿವಿಗೂ ಬಂದಿದೆ. ಇದರ ಪರಿಣಾಮ ರಾಜ್ಯಾದ್ಯಂತ ಜೆಡಿಎಸ್ ಪರ ವಾತಾವರಣ ನಿರ್ಮಾಣವಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡ ಹೇಳಿದರು.ಹೆಬ್ಟಾಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಕಚೇರಿ ಉದ್ಘಾಟಿಸಿ ಮಾತನಾಡಿ, ನೆರೆಯ ತಮಿಳುನಾಡಿನಲ್ಲಿ ಪ್ರಾದೇಶಿಕ ಪಕ್ಷಗಳು ಪ್ರಬಲವಾಗಿವೆ. ಈ ಕಾರಣದಿಂದಲೇ ಅಲ್ಲಿ ರಾಷ್ಟ್ರೀಯ ಪಕ್ಷಗಳು ಏನೂ ಮಾಡಲಾಗದೆ ಪ್ರಾದೇಶಿಕ ಪಕ್ಷಗಳ ಮೊರೆ ಹೋಗುತ್ತವೆ. ಪ್ರಾದೇಶಿಕ ಪಕ್ಷಗಳಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯವಿದ್ದು, ಈ ಜನರು ಬಾರಿ ಜೆಡಿಎಸ್‌ಗೆ ಬೆಂಬಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Comments