ವಿದ್ಯುತ್ ಖರೀದಿ ಅಕ್ರಮಗಳ ಕುರಿತು ಸದನದಲ್ಲಿ ಶಾಸಕ ಎಚ್.ಡಿ.ರೇವಣ್ಣ ಧರಣಿ

ವಿದ್ಯುತ್ ಖರೀದಿ ಅಕ್ರಮಗಳ ಬಗ್ಗೆ ಸದನ ಸಮಿತಿ ವರದಿ ಸೇರಿದಂತೆ ಇಂಧನ ಇಲಾಖೆಯಲ್ಲಿನ ಎಲ್ಲ ಪ್ರಕರಣಗಳ ಬಗ್ಗೆ ವಿಸ್ತೃತ ಚರ್ಚೆಗೆ ಅವಕಾಶ ನೀಡಬೇಕು ಎಂದು ಪದೇ ಪದೇ ಮನವಿ ಮಾಡಿದರೂ ಸಭಾಧ್ಯಕ್ಷರು ಅವಕಾಶ ನೀಡದ ಹಿನ್ನೆಲೆಯಲ್ಲಿ ರೇವಣ್ಣ ಅವರು ವಿದ್ಯುತ್ ಖರೀದಿಗೆ ಸಂಬಂಧಿಸಿದ ಸದನ ಸಮಿತಿ ವರದಿ ಪ್ರದರ್ಶಿಸಿ ಸಭಾಧ್ಯಕ್ಷರ ಪೀಠದ ಮುಂದಿನ ಬಾವಿಯಲ್ಲಿ ಧರಣಿ ಆರಂಭಿಸಿದರು.
ಇಂಧನ ಇಲಾಖೆಯ ಎಲ್ಲ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ಬಹಿರಂಗ ಚರ್ಚೆಗೆ ಸವಾಲು ಹಾಕಿರುವ ಬಗ್ಗೆ ನಿಲುವಳಿ ಸೂಚನೆಯಡಿ ಅವಕಾಶ ನೀಡಬೇಕೆಂದು ಆಗ್ರಹಿಸಿ ಜೆಡಿಎಸ್ ಶಾಸಕರು ವಿಧಾನಸಭೆಯಲ್ಲಿಂದು ಧರಣಿ ನಡೆಸಿದರು. ಜೆಡಿಎಸ್ ಶಾಸಕರ ಧರಣಿಯಿಂದ ಸದನದಲ್ಲಿ ಕೋಲಾಹಲದ ವಾತಾವರಣ ಸೃಷ್ಟಿಯಾದ ಹಿನ್ನೆಲೆಯಲ್ಲಿ ಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಅವರು, ಕಲಾಪವನ್ನು ಕೆಲ ಕಾಲ ಮುಂದೂಡಿದರು.
Comments