ಸದನದಲ್ಲಿ ಪ್ರತಿಧ್ವನಿಸಿದ ಯೋಗೀಶ ಗೌಡ ಪ್ರಕರಣ

24 Nov 2017 6:05 PM | Politics
345 Report

ಯೋಗೀಶ್ ಗೌಡ ಕುಟುಂಬದ ಆರೋಪದ ಬಗ್ಗೆ ಇಂದು ಸುವರ್ಣಸೌಧದಲ್ಲಿ ವರದಿಗಾರರಿಗೆ ಪ್ರತಿಕ್ರಿಯಿಸಿದ ವಿನಯ್ ಕುಲಕರ್ಣಿ, ಬಿಜೆಪಿ ನಾಯಕರು ಅನಗತ್ಯವಾಗಿ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ನನ್ನ ಹೆಸರು ಎಳೆಯುತ್ತಿದ್ದಾರೆ. ಈ ಕೊಲೆಗೂ ನನಗೂ ಯಾವುದೇ ಸಂಬಂಧವಿಲ್ಲ. ಪ್ರತ್ಯೇಕ ಲಿಂಗಾಯತ ಧರ್ಮದ ಸಮಾವೇಶದಿಂದ ನನ್ನ ಹಿಂದೆ ಸರಿಯುವಂತೆ ಮಾಡಲು ಬಿಜೆಪಿ ಈ ಸಂಚು ರೂಪಿಸಿದೆ ಎಂದು ಆರೋಪಿಸಿದ್ದಾರೆ.

ಯೋಗೀಶ್ ಗೌಡ ಕೊಲೆ ಪ್ರಕರಣ ಸದ್ಯ ಕೋರ್ಟ್ ನಲ್ಲಿದ್ದು, ಆ ಬಗ್ಗೆ ಕೋರ್ಟ್ ನಿರ್ಧಾರ ತೆಗೆದುಕೊಳ್ಳಲಿದೆ. ಗುರುನಾಥ್ ಗೌಡ ಸೇರಿದಂತೆ ನಾನು ಯಾರ ಮೇಲೂ ಒತ್ತಡ ಹಾಕಿಲ್ಲ. ಯೋಗೀಶ್ ಅವರು ಮತ್ತೊಂದು ಪಕ್ಷದಲ್ಲಿದ್ದ ಮಾತ್ರಕ್ಕೆ ನನ್ನ ಮೇಲೆ ಆರೋಪ ಮಾಡುವುದು ಸರಿಯಲ್ಲ. ಅವರು ನನ್ನನ್ನು ಯಾವತ್ತೂ ಭೇಟಿ ಮಾಡಿಲ್ಲ ಎಂದಿದ್ದಾರೆ. ಕಳೆದ ವರ್ಷ ಜೂನ್ 15ರಂದು ಬಿಜೆಪಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಅವರನ್ನು ಅವರ ಜಿಮ್ ನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

Edited By

Hema Latha

Reported By

Madhu shree

Comments