ವಿಪಕ್ಷಗಳಿಗೆ ಸೆಡ್ಡುಹೊಡೆಯಲು 224 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳು ಸ್ಪರ್ಧೆ : ಎಚ್ ಡಿಕೆ

2018ರ ಚುನಾವಣೆಯಲ್ಲಿ ಎಲ್ಲ 224 ಕ್ಷೇತ್ರಗಳಲ್ಲೂ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ಸ್ವತಂತ್ರವಾಗಿ ಸರಕಾರ ರಚನೆ ಮಾಡುವಷ್ಟು ಸೀಟುಗಳನ್ನು ಜೆಡಿಎಸ್ ಗೆಲ್ಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.
ಈ ಹಿಂದೆಯೂ ನಾನು ಯಾರೊಂದಿಗೂ ಮ್ಯಾಚ್ ಫಿಕ್ಸಿಂಗ್ ರಾಜಕಾರಣ ಮಾಡಿಲ್ಲ, ಇನ್ಮುಂದೆಯೂ ಮಾಡುವುದಿಲ್ಲ. ಚುನಾವಣೆ ನಂತರವೂ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ದೋಸ್ತಿ ಮಾಡಿಕೊಳ್ಳುವುದಿಲ್ಲ. ಅನಿತಾ ಕುಮಾರಸ್ವಾಮಿ ಅವರನ್ನು ಸಹೋದರಿ ಎಂದು ಕರೆದು ಸಚಿವ ಡಿ.ಕೆ.ಶಿವಕುಮಾರ್ ಕುಶಲೋಪರಿ ವಿಚಾರಿಸಿದ್ದಾರೆ..
Comments