ವಿಧಾನಸಭಾ ಚುನಾವಣೆಯಿಂದ ದೂರ ಉಳಿಯಲಿರುವ ಎಂ.ಪಿ.ರವೀಂದ್

'ಒಂದು ವರ್ಷದಿಂದ ಆಪ್ತರೊಂದಿಗೆ ಚರ್ಚಿಸಿ ಸ್ವಪ್ರೇರಣೆಯಿಂದ ಈ ನಿರ್ಧಾರಕ್ಕೆ ಬಂದಿದ್ದೇನೆ. ನಾನು ಪಲಾಯನವಾದಿ ಅಲ್ಲ. ರಾಜಕಾರಣದಿಂದ ಹಿಂದೆ ಸರಿಯುವುದಿಲ್ಲ. ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ಮುಂದಿನ ಚುನಾವಣೆಯಲ್ಲಿ ಪಕ್ಷ ಯಾರಿಗೇ ಟಿಕೆಟ್ ನೀಡಿದರೂ ಅವರ ಗೆಲುವಿಗಾಗಿ ಶ್ರಮಿಸುತ್ತೇನೆ' ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
'ಬೇರೆ ಪಕ್ಷ ಸೇರುವ ಕುರಿತು ಯಾವ ಮುಖಂಡರೂ ನನ್ನನ್ನು ಸಂಪರ್ಕಿಸಿಲ್ಲ. ಈಗ ಕೈಗೊಂಡಿರುವ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಕೆಎಂಎಫ್ ಅಧ್ಯಕ್ಷ ಸ್ಥಾನ ಸಿಗದಿರುವುದರಿಂದ ನಿರಾಸೆಗೊಂಡಿಲ್ಲ. ಈ ಪ್ರಕರಣ ನ್ಯಾಯಾಲಯದಲ್ಲಿದೆ' ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
Comments