ದಲಿತರಿಗೆ ಉಪ ಮುಖ್ಯಮಂತ್ರಿ ಪಟ್ಟ, ಎಚ್ ಡಿಕೆ

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಓರ್ವ ದಲಿತ ಹಾಗೂ ಒಬ್ಬ ಮುಸ್ಲಿಂ ಸಮುದಾಯದ ನಾಯಕನನ್ನು ಉಪ ಮುಖ್ಯಮಂತ್ರಿ ಆಗಿ ಮಾಡಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಓರ್ವ ದಲಿತ ಹಾಗೂ ಒಬ್ಬ ಮುಸ್ಲಿಂ ಸಮುದಾಯದ ನಾಯಕನನ್ನು ಉಪ ಮುಖ್ಯಮಂತ್ರಿ ಆಗಿ ಮಾಡಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಇವತ್ತು ರಾಜ್ಯದ ವಿವಿಧ ದಲಿತ ಸಂಘಟನೆಯ ಮುಖಂಡರೊಂದಿಗೆ ಮುಕ್ತ ಸಂವಾದ ನಡೆಸಿ ಮಾತನಾಡಿದ ಅವರು, ನಾನು ಸುಮ್ಮನೆ ಭರವಸೆ ನೀಡುವವನಲ್ಲ, ನಾನು ಏನು ಹೇಳುತ್ತೇನೆಯೋ ಆ ರೀತಿ ನಡೆಯುತ್ತೇನೆ. ಆದ್ದರಿಂದ ಮುಂದಿನ ಬಾರಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ದಲಿತ ಸಮುದಾಯದ ಅಭ್ಯರ್ಥಿಯನ್ನು ಉಪ ಮುಖ್ಯಮಂತ್ರಿಯನ್ನಾಗಿ ಮಾಡುತ್ತೇನೆ ಎಂದರು.
ಈ ಬಾರಿ ರಾಜ್ಯದಲ್ಲಿ ಜೆಡಿಎಸ್ ಗೆ ಅಧಿಕಾರ ಕೊಡಿ. ಅಲ್ಪಸಂಖ್ಯಾತ ಸಮುದಾಯ ಸೇರಿದಂತೆ ಎಲ್ಲಾ ಜಾತಿಯ ಬಡವರನ್ನು ಸರ್ವತೋಮುಖ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಪರಿಣಾಮಕಾರಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇನೆ . ಮುಂದಿನ ಹತ್ತು ಇಲ್ಲವೆ ಹದಿನೈದು ವರ್ಷದಲ್ಲಿ ದಲಿತ ಸಮುದಾಯದ ಚಿತ್ರಣವನ್ನೇ ಸಂಪೂರ್ಣವಾಗಿ ಬದಲಾಯಿಸುತ್ತೇನೆಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
Comments