ನಾಗಮಂಗಲ ಕ್ಷೇತ್ರದಿಂದ ಕಣಕ್ಕಿಳಿಯಲು ಜೆಡಿಎಸ್ ಅಭ್ಯರ್ಥಿ ಫಿಕ್ಸ್

ತಾಲೂಕಿನ ಬೆಳ್ಳೂರಿನಲ್ಲಿ ಜೆಡಿಎಸ್ ಪಕ್ಷದ ಹೋಬಳಿ ಘಟಕದ ನೂತನ ಕಚೇರಿಯನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ನಾಗಮಂಗಲ ಕ್ಷೇತ್ರಕ್ಕೆ ಮಾಜಿ ಶಾಸಕ ಸುರೇಶ್‍ಗೌಡ ಅವರೇ ಜೆಡಿಎಸ್ ಅಭ್ಯರ್ಥಿ. ಇದರಲ್ಲಿ ಯಾವುದೇ ಅನುಮಾನ ಅಥವಾ ಬದಲಾವಣೆಯಿಲ್ಲ. ಹೋರಾಟದ ಶಕ್ತಿ ಹಾಗೂ ಕೆಚ್ಚೆದೆಯುಳ್ಳ ಕ್ಷೇತ್ರದ ಎಲ್ಲ ವರ್ಗದ ಜನರು ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವ ಜೊತೆಗೆ, ನಾಗಮಂಗಲ ಕ್ಷೇತ್ರ ಜೆಡಿಎಸ್ ಭದ್ರಕೋಟೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸುವ ಮೂಲಕ ವಿರೋಧಿಗಳಿಗೆ ತಕ್ಕ ಪಾಠಕಲಿಸಿ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಇದಕ್ಕೂ ಮೊದಲು ಬೆಳ್ಳೂರು ಹೋಬಳಿ ಘಟಕದ ಜೆಡಿಎಸ್ ಪಕ್ಷದ ಕಚೇರಿ ಉದ್ಘಾಟನೆಗೆ ಆಗಮಿಸಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಕರೆತರಲು ಪಕ್ಷದ ಕಾರ್ಯಕರ್ತರು ನೂರಾರು ಬೈಕ್‍ಗಳಲ್ಲಿ ತಾಲೂಕಿನ ಗಡಿ ಗೊಂದಿಹಳ್ಳಿಗೆ ತೆರಳಿದ್ದರು. ಗೌಡರು ಬರುತ್ತಿದ್ದಂತೆ ಸ್ವಾಗತ ಕೋರಿದ ಕಾರ್ಯಕರ್ತರು ಬೈಕ್‍ರ್ಯಾಲಿ ಮೂಲಕ ಬೆಳ್ಳೂರಿಗೆ ಕರೆತಂದರು. ಸಂಸದ ಸಿ.ಎಸ್.ಪುಟ್ಟರಾಜು, ವಿಧಾನಪರಿಷತ್ ಸದಸ್ಯ ಎನ್.ಅಪ್ಪಾಜಿಗೌಡ, ಕೆ.ಟಿ.ಶ್ರೀಕಂಠೇಗೌಡ, ಮಾಜಿ ಶಾಸಕರಾದ ಎಂ.ಶ್ರೀನಿವಾಸ್, ಸುರೇಶ್‍ಗೌಡ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್, ಅಂಬುಜಮ್ಮ, ತಾಲೂಕು ಜೆಡಿಎಸ್ ಅಧ್ಯಕ್ಷ ಜವರೇಗೌಡ, ಜಿಪಂ ಸದಸ್ಯ ಶಿವಪ್ರಕಾಶ್, ನೆಲ್ಲಿಗೆರೆ ಬಾಲು ಸೇರಿದಂತೆ ಸಾವಿರಾರು ಮಂದಿ ಜೆಡಿಸ್ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
Comments