ಪ್ರಜ್ವಲ್ ರೇವಣ್ಣಗೆ ಭರವಸೆ ಕೊಟ್ಟ ದೇವೇಗೌಡ್ರು
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಯಾವುದಾದರೂ ಲೋಕಸಭಾ ಕ್ಷೇತ್ರ, ಅಥವಾ ಪ್ರಮುಖವಾಗಿ ಹಾಸನ ಕ್ಷೇತ್ರದಿಂದ ಪಕ್ಷದ ಪರ ಕಣಕ್ಕಿಳಿಸುವುದಾಗಿಯೂ ಎಚ್ ಡಿ ದೇವೇಗೌಡರು ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಇದೇ ಕಾರಣಕ್ಕೆ ಪ್ರಜ್ವಲ್ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ ಎಂದು ಹೇಳಲಾಗುತ್ತಿದೆ.
ಇದಲ್ಲದೆ ಇತ್ತೀಚೆಗಷ್ಟೇ ಪಕ್ಷದ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಸಾಕಷ್ಟು ಬಳಲಿಕೆಯ ನಡುವೆಯೇ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ. ಇದೇ ಕಾರಣಕ್ಕೆ ಕುಮಾರಸ್ವಾಮಿ ಅವರ ಒತ್ತಡವನ್ನು ಕಡಿತಗೊಳಿಸುವ ಕಾರಣದಿಂದಾಗಿಯೂ ಪ್ರಜ್ವಲ್ ರೇವಣ್ಣ ಅವರಿಗೆ ಮಣೆ ಹಾಕಲಾಗಿದೆ ಎನ್ನಲಾಗಿದೆ. ಇನ್ನು ಈ ಬಗ್ಗೆ ಮಾತನಾಡಿರುವ ಪ್ರಜ್ವಲ್ ತಂದೆ ರೇವಣ್ಣ, ಅವನಿನ್ನೂ ಯುವಕ..ಉತ್ಸಾಹವಿದೆ. ಹೀಗಾಗಿ ಪಕ್ಷ ಸಂಘಟನೆಗಾಗಿ ಆತನಿಗೆ ಜವಾಬ್ದಾರಿ ನೀಡಲಾಗಿದೆ. ಕಠಿಣ ಶ್ರಮವಹಿಸಿ ಪಕ್ಷ ಸಂಘಟನೆ ಮಾಡಬೇಕಿದೆ. ಪಕ್ಷದ ಹಿರಿಯ ಮುಖಂಡರಾಗಿ ಪಕ್ಷಕ್ಕಾಗಿ ದುಡಿಯುವವರಿಗೆ ಪ್ರೋತ್ಸಾಹ ನೀಡುವುದು ನಮ್ಮ ಜವಾಬ್ದಾರಿ ಎಂದು ಹೇಳಿದರು.
Comments