ಜೆಡಿಎಸ್ ಜೊತೆ ಮೈತ್ರಿ ಸಾಧ್ಯವಿಲ್ಲ : ಸಿಎಂ ಸಿದ್ದರಾಮಯ್ಯ
ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲಿದೆ ಎಂಬ ವದಂತಿಗಳು ಹರಡಿವೆ ಎಂದು ಕಾರ್ಯಕರ್ತರು ಹೇಳಿದಾಗ, ಅಂತಹ ಯಾವ ಸಾಧ್ಯತೆಗಳೂ ಇಲ್ಲ. ರಾಜ್ಯದ ಯಾವುದೇ ಭಾಗದಲ್ಲಿ ಜೆಡಿಎಸ್ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವುದಿಲ್ಲ, ಕಾರ್ಯಕರ್ತರಿಗೆ ಈ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ಒತ್ತಿ ಹೇಳಿದರು.
ಸಿ.ಪಿ.ಯೋಗೇಶ್ವರ್ ಅವರು ಸಮಾಜವಾದಿ ಪಕ್ಷದಿಂದ ಗೆದ್ದಿದ್ದರು. ಕಾಂಗ್ರೆಸ್‍ಗೆ ಬರುತ್ತೇನೆ. ಮುಂದಿನ ಚುನಾವಣೆಯಲ್ಲೂ ನಿಮ್ಮ ಜೊತೆ ಇರುತ್ತೇನೆ. ಶಾಸಕಾಂಗ ಪಕ್ಷದ ಸಹ ಸದಸ್ಯನಾಗಿ ಮಾಡಿಕೊಳ್ಳಿ ಎಂದು ಕೇಳಿಕೊಂಡಿದ್ದರು. ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್ ಅವರು ಶಿಫಾರಸು ಮಾಡಿದ್ದರಿಂದ ನಾನು ಸಹ ಸದಸ್ಯನನ್ನಾಗಿ ಮಾಡಿಕೊಂಡಿದ್ದೆ. ಆತನನ್ನು ನಮ್ಮ ಪಕ್ಷಕ್ಕೆ ಸೇರಿಸಿಕೊಂಡಿದ್ದೇ ಮಾಡಿದ ದೊಡ್ಡ ತಪ್ಪು ಎಂದು ಸಿಎಂ ಅಸಮಾಧಾನ ವ್ಯಕ್ತಪಡಿಸಿದರು.
ಚನ್ನಪಟ್ಟಣ ಕ್ಷೇತ್ರದ ಮತದಾರರು ಹಾಗೂ ಕಾರ್ಯಕರ್ತರು ಜಾತ್ಯಾತೀತ ನಿಲುವು ಇರುವವರು. ಈ ಮೊದಲು ಅಲ್ಲಿ ಜಿ.ಟಿ.ರಾಮು, ಸಾದತ್‍ಆಲಿ ಅಂಥವರು ಗೆದ್ದಿದ್ದರು. ನಮ್ಮ ಜೊತೆ ಇದ್ದ ವರದೇಗೌಡರನ್ನು ಗೆಲ್ಲಿಸಿದ್ದೀರಾ ಎಂದು ಸಿದ್ದರಾಮಯ್ಯ ಹೇಳಿದರು. ಮುಂದಿನ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ. ಮತ್ತೆ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು ಕರೆ ನೀಡಿದರು.
Comments