ಮಂಡ್ಯದಿಂದ ಅಂಬಿ ಬದಲು ರಮ್ಯಾ ಸ್ಪರ್ಧೆ?

ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ಮುಖ್ಯಸ್ಥೆಯಾಗಿರುವ ರಮ್ಯ ಅವರು ಮಂಡ್ಯದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಬೇಕು ಎಂದು ಮಂಡ್ಯ ಜನ ಬಯಸಿದ್ದಾರೆ. ರಮ್ಯಾ ಅವರು ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯರಾಗಿದ್ದು, ಪಕ್ಷ ಅವರನ್ನು ಮುಂದಿನ ವಿಧಾನಸಭೆಯಲ್ಲಿ ಕಣಕ್ಕಿಳಿಸಬೇಕು. ಆದರೆ ಹೈಕಮಾಂಡ್ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ ಕೆ ಸುರೇಶ್ ಅವರು ಹೇಳಿದ್ದಾರೆ.
ಈ ನಡುವೆ ಮಂಡ್ಯ ಹಾಲಿ ಶಾಸಕ, ಮಾಜಿ ಸಚಿವ ಹಾಗೂ ಹಿರಿಯ ನಟ ಅಂಬರೀಶ್ ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವ ಬಗ್ಗೆಯೇ ಅನುಮಾನ ವ್ಯಕ್ತಪಡಿಸಿದ್ದಾರೆ. ಚುನಾವಣೆಗೆ ಸ್ಪರ್ಧಿಸುವಂತೆ ಹೈಕಮಾಂಡ್ ಸೂಚಿಸಿದರೆ ಸ್ಪರ್ಧಿಸುತ್ತೇನೆ. ಆದರೆ ಮಂಡ್ಯದಲ್ಲಿ ರಮ್ಯಾ ಸ್ಪರ್ಧಿಸುವುದನ್ನು ನಾವು ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ.
Comments