ಬಿಜೆಪಿ ನಾಯಕ ವರುಣ್ ಗಾಂಧಿ ಕಾಂಗ್ರೆಸ್ ಗೆ!



ನವದೆಹಲಿ: ಮಹತ್ವದ ರಾಜಕೀಯ ವಿದ್ಯಮಾನವೊಂದರಲ್ಲಿ ಬಿಜೆಪಿ ಸಂಸದ ವರುಣ್ ಗಾಂಧಿ ಅವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ನವದೆಹಲಿ: ಮಹತ್ವದ ರಾಜಕೀಯ ವಿದ್ಯಮಾನವೊಂದರಲ್ಲಿ ಬಿಜೆಪಿ ಸಂಸದ ವರುಣ್ ಗಾಂಧಿ ಅವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಪಟ್ಟ ಅಲಂಕರಿಸುತ್ತಿದ್ದಂತೆ ಸುಲ್ತಾನ್ ಪುರದ ಸಂಸದ ವರುಣ್ ಗಾಂಧಿ ಕಾಂಗ್ರೆಸ್ ನತ್ತ ಮುಖ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.
ಮತ್ತೊಂದೆಡೆ ಆಗ್ರಾದ ನಗರ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ರಾಮ್ ಟೆಂಡನ್ ಅವರೂ ವರುಣ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಬಹಿರಂಗ ಹೇಳಿಕೆ ನೀಡಿದ್ದಾರೆ.ಹಿರಿಯ ಕಾಂಗ್ರೆಸ್ ನಾಯಕ ಹಾಜಿ ಮಂಜೂರ್ ಅಹಮದ್ ಅವರು ಇಂಡಿಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ವರುಣ್ ಅವರನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ಇಲ್ಲವೇ ಅಥವಾ ಕಚೇರಿಯ ಪ್ರಮುಖರನ್ನಾಗಿ ನೇಮಕ ಮಾಡಿಕೊಳ್ಳಬಹುದು ಎಂದು ಹೇಳಿದ್ದಾರೆ.
Comments