Report Abuse
Are you sure you want to report this news ? Please tell us why ?
34ನೇ ಹುಟ್ಟುಹಬ್ಬ ಆಚರಿಸಿಕೊಂಡ ರಮ್ಯಾ

29 Nov 2017 2:43 PM | Politics
475
Report
ರಮ್ಯಾ ಅವರ ಹುಟ್ಟುಹಬ್ಬವನ್ನು ಮಂಡ್ಯದಲ್ಲಿ ಅವರ ಅಭಿಮಾನಿಗಳು ಮತ್ತು ಜಿಲ್ಲಾ ಕಾಂಗ್ರೆಸ್ ವತಿಯಿಂದ ಆಚರಿಸಲಾಯಿತು. ನಗರದ ಚಾಮುಂಡೇಶ್ವರಿ ದೇವಸ್ಥಾನ, ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ರಮ್ಯಾ ಪರವಾಗಿ ಕೇಕ್ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ರಮ್ಯಾ ಅವರು ಸಂಸದೆಯಾಗಿದ್ದಾಗ ಹಲವು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಹಾಗಾಗಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಮ್ಯಾ ಮಂಡ್ಯದಿಂದ ಸ್ಪರ್ಧಿಸಬೇಕು ಎಂದು ಕಾರ್ಯಕರ್ತರು ಈ ಸಂದರ್ಭದಲ್ಲಿ ಮನವಿ ಮಾಡಿದರು. ಕೊನೇ ಕ್ಷಣದಲ್ಲಿ ಒತ್ತಡ ಹೆಚ್ಚಾದರೆ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಚಿಂತಿಸುವುದಾಗಿ ತಿಳಿಸಿದ್ದಾರೆ.

Edited By
Hema Latha

Comments